ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಮುಖ್ಯ
ಬೆಳಗಾವಿ, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನಮ್ಮ ದೇಶವು ಮಹಿಳಾ ಪ್ರಧಾನ ಕುಟುಂಬ ವ್ಯವಸ್ಥೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಪ್ರತಿಯೊಂದು ಕುಟುಂಬದ ಅಭಿವೃದ್ಧಿಗೆ ಮಹಿಳೆಯರ ಮುಂದಾಳತ್ವ, ಮಾರ್ಗದರ್ಶನ, ಸಹಕಾರದ ಮೇಲೆ ನಿಂತಿದೆ. ಮಹಿಳೆಯರು ಆರ್ಥಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಜಿಲ್ಲೆಯ
ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಮುಖ್ಯ


ಬೆಳಗಾವಿ, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನಮ್ಮ ದೇಶವು ಮಹಿಳಾ ಪ್ರಧಾನ ಕುಟುಂಬ ವ್ಯವಸ್ಥೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಪ್ರತಿಯೊಂದು ಕುಟುಂಬದ ಅಭಿವೃದ್ಧಿಗೆ ಮಹಿಳೆಯರ ಮುಂದಾಳತ್ವ, ಮಾರ್ಗದರ್ಶನ, ಸಹಕಾರದ ಮೇಲೆ ನಿಂತಿದೆ. ಮಹಿಳೆಯರು ಆರ್ಥಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಜಿಲ್ಲೆಯಲ್ಲಿನ ಮಹಿಳೆಯರು ಸ್ವ-ಸಹಾಯ ಸಂಘಗಳ ಮೂಲಕ ಸರ್ಕಾರದ ಸಹಾಯಧನ ಪಡೆದು ಸ್ವ- ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಯಾದ ಬಸವರಾಜ ಹೆಗ್ಗನಾಯಕ ಹೇಳಿದರು.

ಜಿಲ್ಲಾ ಪಂಚಾಯತಯ ಸಂಜೀವಿನಿ ಯೋಜನೆಯಡಿ ಖಾನಾಪುರ ಮತ್ತು ರಾಮದುರ್ಗ ತಾಲ್ಲೂಕಿನ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಜಿಲ್ಲಾ ಪಂಚಾಯತ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ವಸತಿ ಸಹಿತ ಸಾಮರ್ಥ್ಯ ಬಲವರ್ಧನೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷವಾಗಿ ಮಹಿಳೆಯರು ತರಬೇತಿಯನ್ನು ಪಡೆದುಕೊಂಡು ಅತ್ಯಂತ ಕ್ರಿಯಾಶೀಲರಾಗಿ ಆಸಕ್ತಿಯಿಂದ ತರಬೇತಿಯಲ್ಲಿ ಪಾಲ್ಗೊಂಡು ಸರ್ಕಾರದ ಆಶಯದಂತೆ ತಮ್ಮ ಕಾರ್ಯವನ್ನು ನಿರ್ವಹಿಸಬೇಕೆಂದು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande