ವಿಎಸ್‍ಕೆವಿವಿಯಲ್ಲಿ ಅಂತರ್ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ
ಬಳ್ಳಾರಿ, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೈಹಿಕ ಮತ್ತು ಮಾನಸಿಕ ಮನೋಲ್ಲಾಸಕ್ಕೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಅವರು ತಿಳಿಸಿದ್ದಾರೆ. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗ
ವಿಎಸ್‍ಕೆವಿವಿಯಲ್ಲಿ ಎರಡು ದಿನಗಳ ಅಂತರ್ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ  :


ವಿಎಸ್‍ಕೆವಿವಿಯಲ್ಲಿ ಎರಡು ದಿನಗಳ ಅಂತರ್ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ  :


ವಿಎಸ್‍ಕೆವಿವಿಯಲ್ಲಿ ಎರಡು ದಿನಗಳ ಅಂತರ್ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ  :


ವಿಎಸ್‍ಕೆವಿವಿಯಲ್ಲಿ ಎರಡು ದಿನಗಳ ಅಂತರ್ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ  :


ಬಳ್ಳಾರಿ, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೈಹಿಕ ಮತ್ತು ಮಾನಸಿಕ ಮನೋಲ್ಲಾಸಕ್ಕೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ಮುನಿರಾಜು ಅವರು ತಿಳಿಸಿದ್ದಾರೆ.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗ ಏರ್ಪಡಿಸಿರುವ ಎರಡು ದಿನಗಳ ಅಂತರ ಮಹಾವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶ್ರದ್ಧೆಯಿಂದ ಕ್ರೀಡೆಗಳನ್ನು ಕಲಿಯಬೇಕು. ಕ್ರೀಡೆಯಿಂದ ಆರೋಗ್ಯವೂ ವೃದ್ಧಿಸುತ್ತದೆ. ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮೂಡಲಿದೆ ಎಂದರು.

.

ಕುಲಸಚಿವ ಎಸ್.ಎನ್.ರುದ್ರೇಶ್ ಅವರು, ಕ್ರೀಡೆಗಳಿಂದ ಮಾನಸಿಕ ಒತ್ತಡವನ್ನು ನಿಭಾಯಿಸಬಹುದು. ಕ್ರೀಡೆ ಮತ್ತು ಸಂಸ್ಕøತಿಯನ್ನು ಅನುಭವಿಸುವುದರ ಜೊತೆಗೆ ಆಸ್ವಾದಿಸಬೇಕು. ದೇಸಿ ಕಲೆಗಳಿಗೆ ಪ್ರೋತ್ಸಾಹಿಸುವುದು ನಮ್ಮೆಲ್ಲರ ಹೊಣೆ ಎಂದರು.

ಮುಖ್ಯ ಅತಿಥಿಗಳಾದ್ದ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಶೇಖರಗೌಡ ಅವರು, ದೈಹಿಕ ಸದೃಢತೆ ಕಾಪಾಡಿಕೊಳ್ಳುವುದು ಪ್ರತಿ ಕ್ರೀಡಾಪಟುವಿನ ಮೊದಲ ಆದ್ಯತೆ ಆಗಬೇಕು. ಓಲಿಂಪಿಕ್ಸ್ ಕ್ರೀಡೆಗಳಲ್ಲಿ ಕಬಡ್ಡಿ ಮತ್ತು ಖೋ-ಖೋ ಕ್ರೀಡೆಗಳನ್ನು ಆರಂಭಿಸಲು ಸರ್ಕಾರಕ್ಕೆ ಮನವಿ ಪತ್ರ ನೀಡಲಾಗಿದೆ ಎಂದರು.

ಕ್ರೀಡಾ ವಿಭಾಗದ ನಿರ್ದೇಶಕ ಡಾ.ಶಶಿಧರ್ ಕೆಲ್ಲೂರ್, ಸಹಾಯಕ ಪ್ರಾಧ್ಯಾಪಕ ಡಾ. ಸಂಪತ್ ಕುಮಾರ್ ವೇದಿಕೆಯಲ್ಲಿದ್ದರು.

ವಿಶ್ವವಿದ್ಯಾಲಯದ ಅಧೀನದ 15 ಮಹಾವಿದ್ಯಾಲಯಗಳ ದೈಹಿಕ ಶಿಕ್ಷಣ ಸಂಯೋಜಕರುಗಳು, ಪ್ರಾಧ್ಯಾಪಕರುಗಳು ಸೇರಿದಂತೆ 150ಕ್ಕೂ ಹೆಚ್ಚು ಸ್ಫರ್ಧಾಳುಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡಾ ವಿಭಾಗದ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande