ದರ್ಶನ್ ಜಾಮೀನು ಅರ್ಜಿ ; ಆರೋಗ್ಯ ಕುರಿತು ಮಾಹಿತಿ ಕೇಳಿದ ನ್ಯಾಯಾಲಯ
ಬೆಂಗಳೂರು, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರೇಣುಕಾಸ್ವಾಮಿ ಕೊಲೆ ಪ್ರಕರಣದ‌ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಕಾರಾಗೃಹದ ಅಧಿಕಾರಿಗಳಿಗೆ ಉಚ್ಚ ನ್ಯಾಯಾಲಯ ಸೂಚನೆ ನೀಡಿದೆ. ಜಾಮೀನು ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ
IT officers to investigate Darshan in Renukaswamy


ಬೆಂಗಳೂರು, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರೇಣುಕಾಸ್ವಾಮಿ ಕೊಲೆ ಪ್ರಕರಣದ‌ ಎರಡನೇ ಆರೋಪಿ ನಟ ದರ್ಶನ್ ತೂಗುದೀಪ ಅವರ ಆರೋಗ್ಯದ ಕುರಿತು ಮಾಹಿತಿ ನೀಡುವಂತೆ ಕಾರಾಗೃಹದ ಅಧಿಕಾರಿಗಳಿಗೆ ಉಚ್ಚ ನ್ಯಾಯಾಲಯ ಸೂಚನೆ ನೀಡಿದೆ.

ಜಾಮೀನು ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ಅರ್ಜಿಯ ಕುರಿತಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಅವರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ಅರ್ಜಿದಾರ‌ ದರ್ಶನ್ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದಾರೆ. ವಿಮ್ಸ್ ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಎಂಆರ್​ಐ ಸ್ಕ್ಯಾನ್ ಮಾಡಿಸಲಾಗಿದೆ. ಬೆನ್ನು ಹುರಿಯ ಸರ್ಜರಿ ಅಗತ್ಯವೆಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹೀಗಾಗಿ ಅನಾರೋಗ್ಯ ಕಾರಣಕ್ಕೆ ಜಾಮೀನು ಕೇಳುತ್ತಿದ್ದೇವೆ ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರ ದರ್ಶನ್ ಅವರ ವೈದ್ಯಕೀಯ ವರದಿ ನೀಡಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಹಿನ್ನೆಲೆ ದರ್ಶನ್‌ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande