ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ
ವಯನಾಡ್, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಕೇರಳದ ವಯನಾಡ್ ಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದು, ತಾಯಿ ಸೋನಿಯಾ ಈ ಸಂದರ್ಭದಲ್ಲಿ ಅವರ ಜೊತೆಗಿರಲಿದ್ದಾರೆ. ಇದಲ್ಲದ
ವಯನಾಡು


ವಯನಾಡ್, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ಕೇರಳದ ವಯನಾಡ್ ಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ನಾಳೆ ನಾಮಪತ್ರ ಸಲ್ಲಿಸಲಿದ್ದು, ತಾಯಿ ಸೋನಿಯಾ ಈ ಸಂದರ್ಭದಲ್ಲಿ ಅವರ ಜೊತೆಗಿರಲಿದ್ದಾರೆ. ಇದಲ್ಲದೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೂವರು ಕಾಂಗ್ರೆಸ್ ಮುಖ್ಯಮಂತ್ರಿಗಳು ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಕೂಡ ಕೇರಳಕ್ಕೆ ಭೇಟಿ ನೀಡಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಭರ್ಜರಿ ರೋಡ್​ ಶೋ : ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆಗೂ ಮುಂಚೆ ಕಲ್ಪೆಟ್ಟಾದಲ್ಲಿ ರೋಡ್ ಶೋ ನಡೆಯಲಿದೆ. ಈ ರೋಡ್ ಶೋನ ಕೊನೆಯ ಕ್ಷಣದ ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಕಾಸರಗೋಡು ಲೋಕ ಸಭಾ ಸದಸ್ಯ ರಾಜ್ ಮೋಹನ್ ಉನ್ನಿಥಾನ್ ಅವರು ಸುದ್ದಿಗಾರರ ನೊಂದಿಗೆ ಮಾತನಾಡಿ, ಸೋನಿಯಾ ಗಾಂಧಿ ಬುಧವಾರ ಕಣ್ಣೂರಿಗೆ ತಲುಪಲಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಪ್ರಿಯಾಂಕಾ ವಯನಾಡ್ ತಲುಪಲಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ವಯನಾಡ್​ಗೆ ಬರಲಿದ್ದಾರೆ. ಎಂದು ಮಾಹಿತಿ ನೀಡಿದರು.

ಸೋನಿಯಾ ಗಾಂಧಿ ಅವರು ಒಂದು ದಶಕದ ನಂತರ ಕೇರಳಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande