ಪಾಕಿಸ್ತಾನದ ಚೆಕ್‌ಪೋಸ್ಟ್‌ ಮೇಲೆ ಉಗ್ರರ ದಾಳಿ :  ನಾಲ್ವರು ಭದ್ರತಾ ಸಿಬ್ಬಂದಿ ಸಾವು
ಪೇಶಾವರ​(ಪಾಕಿಸ್ತಾನ), 25 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಪಾಕಿಸ್ತಾನದ ಪ್ರಕ್ಷುಬ್ದ ಖೈಬರ್​ ಪಖ್ತುಂಖ್ವಾ ಪ್ರಾಂತ್ಯದ ಚೆಕ್​ ಪೋಸ್ಟ್​ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಕನಿಷ್ಠ ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್
ಪಾಕಿಸ್ತಾನದ ಚೆ


ಪೇಶಾವರ​(ಪಾಕಿಸ್ತಾನ), 25 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಪಾಕಿಸ್ತಾನದ ಪ್ರಕ್ಷುಬ್ದ ಖೈಬರ್​ ಪಖ್ತುಂಖ್ವಾ ಪ್ರಾಂತ್ಯದ ಚೆಕ್​ ಪೋಸ್ಟ್​ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಕನಿಷ್ಠ ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ದಾರಾಬನ್ ಪ್ರದೇಶದ ಚೆಕ್‌ಪೋಸ್ಟ್‌ನಲ್ಲಿ ದಾಳಿ ನಡೆದಾಗ ಭದ್ರತಾ ಸಿಬ್ಬಂದಿ ದಾಳಿ​ ಮಾಡಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಯೋಧರ ಹೊಸ ತುಕಡಿ ದಾಳಿಕೋರರನ್ನು ಬಂಧಿಸಲು ಬೃಹತ್​ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.ಸದ್ಯ ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಗುಂಪು ಹೊತ್ತುಕೊಂಡಿಲ್ಲ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande