ಗದಗ, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾ ಪೋಲಿಸರು ಅಂತರ ಜಿಲ್ಲಾ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ಸೇರಿದಂತೆ ಹೊಸಪೇಟೆ, ತೋರಣಗಲ್ಲು, ಬಳ್ಳಾರಿ, ಹುಬ್ಬಳ್ಳಿ ವ್ಯಾಪ್ತಿಯಲ್ಲಿ ಕಳುವಾಗಿದ್ದ ಬೈಕ್ ಕಳ್ಳತನ ಪ್ರಕರಣವನ್ನು ಬೆಟಗೇರಿ ಬಡಾವಣೆ ಠಾಣೆ ಪೊಲೀಸರು ಭೇದಿಸಿದ್ದು ಓರ್ವನನ್ನು ಬಂಧಿಸಿದ್ದಾರೆ.
ಗದಗ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ
ಬಿ ಎಸ್ ನೇಮಗೌಡ, ಮಾರ್ಗದರ್ಶನದಲ್ಲಿ ಬೆಟಗೇರಿ ವೃತ್ತದ ಇನ್ಸ್‌ಪೆಕ್ಟರ್ ಧೀರಜ್ ಸಿಂಧೆ ನೇತೃತ್ವದಲ್ಲಿ ಪ್ರಕರಣ ಬೇಧಿಸಿದ್ದು, ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 02, ಹೊಸಪೇಟೆ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 02, ತೋರಣಗಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 03. ಬಳ್ಳಾರಿ ಕೌಲ್‌ಬಜಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 04 ಮತ್ತು ಹುಬ್ಬಳ್ಳಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 01 ಸೇರಿದಂತೆ ಒಟ್ಟು 4,40,000 ರೂಪಾಯಿ ಮೌಲ್ಯದ 12 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು ತನಿಖೆಯನ್ನ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa