ತೋರಣಗಲ್ಲು ಯುವಕ ಕಾಣೆ: ಪತ್ತೆಗೆ ಮನವಿ
ತೋರಣಗಲ್ಲು, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ತೋರಣಗಲ್ಲು ರೈಲ್ವೇ ಸ್ಟೇಷನ್ ನಿವಾಸಿಯಾದ ರಾಮಕೃಷ್ಣ ಕನ್ನೆಟಿ (28) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ. ಯುವಕನ ಚಹರೆ ವಿವರ: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸ
ತೋರಣಗಲ್ಲು ಯುವಕ ಕಾಣೆ: ಪತ್ತೆಗೆ ಮನವಿ


ತೋರಣಗಲ್ಲು, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ತೋರಣಗಲ್ಲು ರೈಲ್ವೇ ಸ್ಟೇಷನ್ ನಿವಾಸಿಯಾದ ರಾಮಕೃಷ್ಣ ಕನ್ನೆಟಿ (28) ಕಾಣೆಯಾಗಿರುವ ಕುರಿತು ಪ್ರಕರಣ ದಾಖಲೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ಯುವಕನ ಚಹರೆ ವಿವರ: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಕಪ್ಪು ಮತ್ತು ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.

ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.083935-250100, ಮೊ.9480803062 ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande