ಲಕ್ನೋ , 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅಯೋಧ್ಯೆಯ ರಾಮ ಮಂದಿರದಲ್ಲಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಸರ್ಕಾರ ಸಿದ್ಧತೆ ಆರಂಭಿಸಿದೆ.
ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಹಬ್ಬದ ದಿನದಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿ ಪರಿಣಾಮ ಬೀರುವುದನ್ನು ತಡೆಯಲು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ವಿಶೇಷ ಮೇಣದ ದೀಪಗಳನ್ನು ಬಳಸಲಾಗುತ್ತದೆ. ದೀರ್ಘಕಾಲದವರೆಗೆ ಈ ದೀಪಗಳು ಬೆಳಗಲಿವೆ. ಈ ದೀಪೋತ್ಸವದಲ್ಲಿ ಪರಿಸರ ಸಂರಕ್ಷಣೆಯೂ ಪ್ರಮುಖವಾಗಿರಲಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್