ಬೆಂಗಳೂರು, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಳೆದ ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೇ ಏರಿಕೆಯಾಗಿದೆ. ಸೋಮವಾರ ೪೫ ರೂಪಾಯಿಗಳ ಇಳಿಕೆ ಕಂಡಿದ್ದ ಚಿನ್ನ ಇಂದು ೬೦ ರೂಪಾಯಿಗಳ ಏರಿಕೆ ಕಂಡಿದೆ.
ಕಳೆದ ವಾರ ಯಥಾಸ್ಥಿತಿಯಲ್ಲಿದ್ದ ಬೆಳ್ಳಿ ಬೆಲೆ ಇಂದು ೨ ರೂಪಾಯಿಗಳ ಏರಿಕೆಯಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್‌ನ 22 ಕ್ಯಾರಟ್ ಚಿನ್ನದ ಬೆಲೆ 73,750 ರೂಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 80,450 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರೂಪಾಯಿ ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 73,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 9,900 ರೂಪಾಯಿಯಲ್ಲಿ ಇದೆ.
ವಿದೇಶಿ ಮಾರುಕಟ್ಟೆ ಚಿನ್ನ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa