ಕಾಸರಗೋಡು, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂಬುದಾಗಿ ವರದಿಯಾಗಿದೆ.
ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದೆ ಎಂಬುದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ಜಿಲ್ಲಾಸ್ಪತ್ರೆ ಹಾಗೂ ನೀಲೇಶ್ವರ ಮತ್ತು ಕಾಸರಗೋಡಿನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್