ಬೆಂಗಳೂರು, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಗಲಿ ಮೂರು ವರ್ಷಗಳು ಉರುಳಿವೆ. 3ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಅಪ್ಪು ಸಮಾಧಿಗೆ ಅವರು ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
2021ರ ಅ.29ರಂದು ಪುನೀತ್ ಅವರ ಅಕಾಲಿಕ ನಿಧನ ಅಭಿಮಾನಿಗಳನ್ನು ಒಳಗೊಂಡಂತೆ ಇಡೀ ಕನ್ನಡ ಚಿತ್ರರಂಗವನ್ನು ಆಘಾತಕ್ಕೆ ದೂಡಿತ್ತು. ಇದಾಗಿ 3 ವರ್ಷ ಕಳೆದಿದ್ದು, ಅವರ ಸಮಾಧಿಗೆ ಭೇಟಿ ನೀಡುವ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ.
ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್ ಕುಮಾರ್, ವಿನಯ್ ರಾಜ್ ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್