ನವದೆಹಲಿ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಾಜಕೀಯ ಹಿತಾಸಕ್ತಿಗಳ ಕಾರಣದಿಂದ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಫಲವಾಗಿದೆ, ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕ ಆರೋಗ್ಯದ ವಿಷಯದ ಬಗ್ಗೆ ತಪ್ಪಾಗಿ ಮಾತನಾಡುವುದು ಮತ್ತು ಅದರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ. ಪ್ರಧಾನಿ ಮೋದಿ ದೆಹಲಿ ಮಾದರಿಯ ಆರೋಗ್ಯ ರಕ್ಷಣೆ ಯೋಜನೆಯನ್ನು ಅಧ್ಯಯನ ಮಾಡಬೇಕು. ದೆಹಲಿ ಸರ್ಕಾರದ ಯೋಜನೆಯಡಿಯಲ್ಲಿ, ನಗರದ ಪ್ರತಿಯೊಬ್ಬ ವ್ಯಕ್ತಿಯು ಉಚಿತ ವೈದ್ಯಕೀಯ ಚಿಕಿತ್ಸೆಯನ್ನು ಪಡೆಯುತ್ತಾನೆ. 5 ರೂ. ಮಾತ್ರೆ ಅಥವಾ 1 ಕೋಟಿ ರೂ. ಮೌಲ್ಯದ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದು ಹೇಳಿದರು.
ಜನರಿಗೆ ವಾಸ್ತವದಲ್ಲಿ ಆರೋಗ್ಯ ಪ್ರಯೋಜನಕ್ಕಾಗಿ ದೇಶದಾದ್ಯಂತ ದೆಹಲಿಯಂತೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಬದಲಿಸಬೇಕು ಎಂದು ಒತ್ತಾಯಿಸಿದ ಕೇಜ್ರಿವಾಲ್, ಈವರೆಗೂ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆದ ವ್ಯಕ್ತಿಯನ್ನು ತಾನು ಇನ್ನೂ ಭೇಟಿ ಮಾಡಿಲ್ಲ ಎಂದು ಕೇಜ್ರಿವಾಲ್ ವ್ಯಂಗ್ಯ ಮಾಡಿದರು. ಆಯುಷ್ಮಾನ್ ಭಾರತ್ ಯೋಜನೆಯಡಿ ಸಿಎಜಿ ಅದರಲ್ಲಿ ಹಲವಾರು ಅಕ್ರಮಗಳನ್ನು ಕಂಡು ಹಿಡಿದಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್