ತುಮಕೂರು, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ನರೇಗಾ ಯೋಜನೆ ಮೂಲಕ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕೆ.ಟಿ. ಅನಿಲ್ ಕುಮಾರ್ ತುಮಕೂರಿನಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನರೇಗಾ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೂಲಿಕಾರ್ಮಿಕರಿಗೆ ಸಕಾಲಕ್ಕೆ ಕೂಲಿ ಪಾವತಿಸಿ ತುಮಕೂರು ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. .
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ೧೧೬೧ ಶಾಲಾ ಕಾಂಪೌಂಡ್, ೮೭೪ ಶೌಚಾಲಯ, ೯೪೫ ಆಟದ ಮೈದಾನ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್