ಜಮ್ಮು, 30 ಅಕ್ಟೋಬರ್ (ಹಿ.ಸ.):
ಆ್ಯಂಕರ್:ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಹಾಗೂ ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಓರ್ವನನ್ನು ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ.
ಬಾರಾಮುಲ್ಲಾದ ಸಲೀಂ ಲೋನ್ ಬಂಧಿತನಾಗಿದ್ದು ಈತ ಗಡಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿರುವ ಕುರಿತು ವಿಚಾರಣೆ ವೇಳೆ ಬಹಿರಂಗವಾಗಿದೆ. ಬಂಧಿತನಿಂದ ಮಾದಕ ವಸ್ತು, ಒಂದು ಪಿಸ್ತೂಲ್, ಆರು ಮ್ಯಾಗಜೀನ್ ಹಾಗೂ ಚೀನಾ ನಿರ್ಮಿತ ಎರಡು ಗ್ರೇನೈಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತನ ವಿಚಾರಣೆ ಮುಂದುವರೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa