ರಾಯಚೂರು, 30 ಅಕ್ಟೋಬರ್ (ಹಿ.ಸ.)
ಆ್ಯಂಕರ್: ಗ್ರಾಮೀಣ ಪ್ರದೇಶದ ಸ್ವ-ಸಹಾಯಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ಸಂಜೀವಿನಿ ಮಾಸಿಕ ಸಂತೆ ಉತ್ತಮ ವೇದಿಕೆಯಾಗಿದೆ ಎಂದು ಎನ್.ಆರ್.ಎಲ್.ಎಮ್. ಬ್ಲಾಕ್ ಮ್ಯಾನೇಜರ್ ಖಾಸಿಂ ಅವರು ಹೇಳಿದ್ದಾರೆ.
ಅವರು ಅ.30ರ ಬುಧವಾರ ದಂದು ಜಿಲ್ಲೆಯ ಮಾನವಿ ಪಟ್ಟಣದ ಸಂತೆ ಮಾರುಕಟ್ಟೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸವಂರ್ಧನ ಸಂಸ್ಥೆ, ಜಿಲ್ಲಾ ಪಂಚಾಯತ್ ರಾಯಚೂರು, ತಾಲೂಕು ಪಂಚಾಯತ್ ಮಾನವಿ, ತಾಲೂಕು ಸಂಜೀವಿನಿ ನಿರ್ವಹಣಾ ಘಟಕ, ಸಿರಿ ಸಂಜೀವಿನಿ ತಾಲ್ಲೂಕು ಮಟ್ಟದ ಒಕ್ಕೂಟರವರ ಸಹಯೋಗದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮ ಮತ್ತು ಸಂಜೀವಿನಿ ಮಾಸಿಕ ಸಂತೆಯ ವಸ್ತು ಪ್ರದರ್ಶನ, ಮಾರಾಟಕ್ಕೆ ಚಾಲನೆ ನೀಡಿ, ಮಾತನಾಡಿದರು.
ಗ್ರಾಮೀಣ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಪಡಿಸಲು ಉತ್ತೇಜನ ನೀಡುವುದಕ್ಕಾಗಿ ತಾಲೂಕು ಮಟ್ಟದಲ್ಲಿ ಮಾಸಿಕ ಸಂತೆ ಕಾರ್ಯಕ್ರಮ ಅನುμÁ್ಠನಗೊಳಿಸಿದೆ ಸ್ವ ಸಹಾಯ ಗುಂಪುಗಳು ತಯಾರಿಸಿರುವ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆಯನ್ನು ಆಯೋಜಿಸಲಾಗುತ್ತಿದೆ ಎಂದರು.
ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟದ ಕಾರ್ಯದರ್ಶಿ ಈರಮ್ಮ ಅವರು ಮಾತನಾಡಿ ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ದೀಪಾವಳಿ ಹಬ್ಬದ ಪ್ರಯುಕ್ತ ಅಂಗವಾಗಿ ಸಂಜೀವಿನಿ ಮಾಸಿಕ ಸಂತೆಯಲ್ಲಿ ಸಂಜೀವಿನಿ ಕಾರ್ಯಕ್ರಮದಲ್ಲಿ ವಿವಿಧ ಒಕ್ಕೂಟದ ಕಡೆಯಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಸ್ವಂತ ಪರಿಶ್ರಮ ಹಾಗೂ ಕರ ಕುಶಲತೆಯಿಂದ ತಯಾರಿಸಿದ ದೀಪಗಳು, ಮಣ್ಣಿನ ಹಣತೆಗಳು, ತಿಂಡಿ-ತಿನಿಸುಗಳು, ಕಯಯಯಳ ಬಟ್ಟೆ, ಖಾರದ ಪುಡಿ ಹಾಗೂ ವಿವಿಧ ಬಗೆಯ ಉಪ್ಪಿನಕಾಯಿ ಮತ್ತು ರೊಟ್ಟಿಯ ಖಾದ್ಯಗಳು ಸೇರಿದಂತೆ ಸ್ವಳೀಯ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಾಯಿತು.
ಈ ಸಂದರ್ಭದಲ್ಲಿ ಎನ್.ಆರ್.ಎಲ್.ಎಮ್. ವಲಯ ಮೇಲ್ವಿಚಾರಕ ಶರಣು ಬಸವ, ಡಿಇಓ ಬಸವರಾಜ, ತಾಲೂಕು ಮಟ್ಟದ ಸಂಪನ್ಮೂಲ ವ್ಯಕ್ತಿ ರುದ್ರಮ್ಮ ಸೇರಿದಂತೆ ವಿವಿಧ ಒಕ್ಕೂಟದ ಮಹಿಳಾ ಉದ್ಯಮಿದಾರರು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್