ನವದೆಹಲಿ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ರಕ್ಷಣಾ ವಲಯದಲ್ಲಿ ಆಮದು ಪ್ರಮಾಣ ಕಡಿಮೆ ಮಾಡುವುದು ಮತ್ತು ಆತ್ಮನಿರ್ಭರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಭಾರತೀಯ ನೌಕಾಪಡೆಯ ಸ್ವಾವಲಂಬನ್ - ೨೦೨೪ ಕಾರ್ಯಕ್ರಮದಲ್ಲಿ ಅವರು, ಕಳೆದ ಹತ್ತು ವರ್ಷಗಳಲ್ಲಿ ರಕ್ಷಣಾ ವಲಯ ಭಾರಿ ಪರಿವರ್ತನೆ ಕಂಡಿದೆ ಎಂದರು.
೧೯೯೦ರ ದಶಕದಲ್ಲಿ ಕಂಪ್ಯೂಟರ್ ಕ್ರಾಂತಿ, ನಂತರ ಆರ್ಥಿಕ ಸುಧಾರಣಾ, ಬಳಿಕ ಮಾಹಿತಿ ತಂತ್ರಜ್ಞಾನ ಕ್ರಾಂತಿ ಮುಂತಾದವುಗಳಿಂದ ಆರ್ಥಿಕತೆ, ಮಾರುಕಟ್ಟೆ, ವಿಜ್ಞಾನ- ತಂತ್ರಜ್ಞಾನ ಸೇರಿದಂತೆ ಹಲವು ವಲಯಗಳಲ್ಲಿ ಸಾಕಷ್ಟು ಬದಲಾವಣೆಯಾದರೂ ರಕ್ಷಣಾ ವಲಯ ಹೆಚ್ಚಿನ ಬದಲಾವಣೆ ಕಾಣಲಿಲ್ಲ ಎಂದರು.
ಇದೀಗ ಸಂಶೋಧನೆ, ಅಭಿವೃದ್ಧಿ, ನಾವೀನ್ಯತೆ, ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ದೇಶದ ರಕ್ಷಣೆ ಮತ್ತು ಭದ್ರತಾ ವ್ಯವಸ್ಥೆ ಬಲಗೊಂಡಿದೆ ಎಂದು ತಿಳಿಸಿದರು.
ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಸೇರಿದಂತೆ ಹಿರಿಯ ಸೇನಾಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್