ನವದೆಹಲಿ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಶ್ವ ಏಕತಾ ದಿನದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ನವದೆಹಲಿಯಲ್ಲಿ ಏಕತಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್, ಆರೋಗ್ಯ ಕಾರ್ಯದರ್ಶಿ ಪುಣ್ಯ ಸಾಲಿಯಾ ಶ್ರೀವಾಸ್ತವ್ ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.
ನಂತರ ಮಾತನಾಡಿದ ಜೆ.ಪಿ. ನಡ್ಡಾ, ಏಕಭಾರತ್ ಶ್ರೇಷ್ಠ ಭಾರತ ಪರಿಕಲ್ಪನೆಗೆ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರು ಭದ್ರ ಬುನಾದಿ ಹಾಕಿದ್ದು, ರಾಷ್ಟ್ರೀಯ ಏಕತೆಯಿಂದ ಸಮಾಜ ಮತ್ತು ದೇಶ ತ್ವರಿತವಾಗಿ ಪ್ರಗತಿ ಸಾಧಿಸಲಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್