ಮಂಗಳೂರು, 08 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉದ್ಯಮಿ ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಂಗಳೂರು ಸಿಸಿಬಿ ಪೋಲಿಸರು ಬಂದಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಆಯಿಷಾ,ರೆಹಮತ್, ಶೊಹೇಬ್ ಹಾಗೂ ಸಿರಾಜ್ ಬಂಧಿತರು.
ಮುಮ್ತಾಜ್ ಆಲಿ ಅವರಿಗೆ ಹಣ ನೀಡುವಂತೆ ನಿರಂತರವಾಗಿ ನೀಡಿದ ಕಿರುಕುಳದಿಂದ ಮುಮ್ತಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಕಾವುರ ಠಾಣೆಯಲ್ಲಿ ೬ ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ನಾಲ್ವರ ಬಂಧನವಾಗಿದೆ. ಇನ್ನುಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೋಲಿಸರು ಜಾಲ ಬೀಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa