ಬೈರೂತ್ , 09 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಇಸ್ರೇಲ್ ದಿನದಿಂದ ದಿನಕ್ಕೆ ಯುದ್ಧದ ತೀವ್ರತೆಯನ್ನು ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಲೆಬನಾನ್ ಜನ ಸಂಕಷ್ಟಕ್ಕೀಡಾಗಿ ದೇಶ ತೊರೆದಿದ್ದಾರೆ. ಇಸ್ರೇಲ್ ಜೊತೆಗಿನ ಸಂಘರ್ಷದಿಂದಾಗಿ ಲೆಬನಾನ್ನ 12 ಲಕ್ಷ ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ಇದರಿಂದಾಗಿ ಸುಮಾರು 2.20 ಲಕ್ಷ ಮಂದಿ ಲೆಬನಾನ್ನಿಂದ ಸಿರಿಯಾಕ್ಕೆ ವಲಸೆ ಹೋಗಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಇಸ್ರೇಲ್ನ ಯುದ್ಧ ವಿಮಾನಗಳು ಲೆಬನಾನ್ನ ಬೆಕಾ ಪ್ರದೇಶ ಮತ್ತು ಬೈರೂತ್ನಲ್ಲಿ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿದೆ. ಮೂಲಸೌಕರ್ಯ ತಾಣಗಳು, ಲಾಂಚರ್ಗಳು, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ಗಳು ಹಾಗೂ ಶಸ್ತ್ರಾಸ್ತ್ರಗಳ ಸಂಗ್ರಹಣಾ ಸೌಲಭ್ಯ ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ. ಅಲ್ಲದೇ ಮೂರು ದಿನಗಳ ಹಿಂದೆಯಷ್ಟೇ ಕೇವಲ 1 ಗಂಟೆ ಅವಧಿಯಲ್ಲಿ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರ ನೆಲೆಗಳನ್ನು ಧ್ವಂಸ ಮಾಡಿದೆ. ಅಲ್ಲದೇ ಸದ್ಯಕ್ಕೆ ಕದನ ವಿರಾಮ ಘೋಷಣೆಯಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಇದರಿಂದ ಭಯಭೀತರಾಗಿರುವ 2.20 ಲಕ್ಷ ಮಂದಿ ಸಿರಿಯಾಕ್ಕೆ ಪಲಾಯನ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್