ವಾಷಿಂಗ್ಟನ್, 01 ನವೆಂಬರ್ (ಹಿ.ಸ.) :
ಆ್ಯಂಕರ್ : ಅಮೆರಿಕದ ಉಪಾಧ್ಯಕ್ಷೆ ಹಾಗೂ ಮುಂದಿನ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯಾಗಿರುವ ಕಮಲಾ ಹ್ಯಾರಿಸ್ ಅವರು ಕೂಡ ಈ ಬಾರಿಯ ದೀಪಾವಳಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದು, ತಮ್ಮ ಅಧಿಕೃತ ನಿವಾಸದಲ್ಲಿ ಅನಿವಾಸಿ ಭಾರತೀಯರೊಂದಿಗೆ ಬೆಳಕಿನ ಹಬ್ಬವನ್ನು ಆಚರಿಸಿ ಸಂಭ್ರಮಿಸಿದ್ದಾರೆ. ಕಮಲಾ ಹ್ಯಾರಿಸ್ ಮತ್ತು ಅವರ ಪತಿ ಡೌಗ್ ಎಂಹಾಫ್ ಅವರು, ವಾಷಿಂಗ್ಟನ್‌ನಲ್ಲಿರುವ ತಮ್ಮ ನಿವಾಸದಲ್ಲಿ ದೀಪಾವಳಿಯನ್ನು ಆಚರಿಸಿದರು.
“ಇಂದು ನಾವು ಅಮೆರಿಕದಾದ್ಯಂತ ಮತ್ತು ಪ್ರಪಂಚದಾದ್ಯಂತ 1 ಶತಕೋಟಿಗೂ ಹೆಚ್ಚು ಜನರೊಂದಿಗೆ ದೀಪಗಳನ್ನು ಬೆಳಗಿಸಿದ್ದೇವೆ. ಕೆಟ್ಟದ್ದರ ಮೇಲೆ ಒಳ್ಳೆಯದಕ್ಕಾಗಿ ಹೋರಾಟವನ್ನು ಆಚರಿಸಿದ್ದೇವೆ. ಅಜ್ಞಾನದ ಮೇಲೆ ಜ್ಞಾನ ಮತ್ತು ಕತ್ತಲೆಯ ಮೇಲೆ ಬೆಳಕು ಚೆಲ್ಲಲಿ” ಎಂದು ಕಮಲಾ ಹ್ಯಾರಿಸ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್