ಗಜ್ಜರಿ ನಿರೀಕ್ಷೆಗೂ ಮೀರಿದ ಆರೋಗ್ಯ ಲಾಭ
ಬೆಂಗಳೂರು, 18 ನವೆಂಬರ್ (ಹಿ.ಸ.) : ಆ್ಯಂಕರ್ : ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ಅನೇಕ ಹಣ್ಣುಗಳು ಮತ್ತು ತರಕಾರಿಗಳು ಲಭ್ಯವಿವೆ. ಮಾರುಕಟ್ಟೆಯಲ್ಲಿ ಕಂಡುಬರುವ ತಾಜಾ ಹಣ್ಣುಗಳು ಮತ್ತು ತರಕಾರಿಗಳು ಹಬ್ಬದಂತಿವೆ. ಅದರಲ್ಲಿ ಗಜ್ಜರಿ ಕೂಡ ಒಂದು.ಕೇವಲ ಅಡುಗೆಯಲ್ಲಿ ಮಾತ್ರವಲ್ಲ, ಗಜ್ಜರಿ ಹಲ್ವಾ, ಗ
ಗಜ್ಜರಿ


ಬೆಂಗಳೂರು, 18 ನವೆಂಬರ್ (ಹಿ.ಸ.) :

ಆ್ಯಂಕರ್ : ಚಳಿಗಾಲ ಪ್ರಾರಂಭವಾಗಿದೆ. ಚಳಿಗಾಲದಲ್ಲಿ ಅನೇಕ ಹಣ್ಣುಗಳು ಮತ್ತು ತರಕಾರಿಗಳು ಲಭ್ಯವಿವೆ. ಮಾರುಕಟ್ಟೆಯಲ್ಲಿ ಕಂಡುಬರುವ ತಾಜಾ ಹಣ್ಣುಗಳು ಮತ್ತು ತರಕಾರಿಗಳು ಹಬ್ಬದಂತಿವೆ. ಅದರಲ್ಲಿ ಗಜ್ಜರಿ ಕೂಡ ಒಂದು.ಕೇವಲ ಅಡುಗೆಯಲ್ಲಿ ಮಾತ್ರವಲ್ಲ, ಗಜ್ಜರಿ ಹಲ್ವಾ, ಗಜ್ಜರಿ ಸೂಪ್, ಗಜ್ಜರಿ ಪಲ್ಯ, ಗಜ್ಜರಿ ಪಾಯಸ ಹೀಗೆ ಹಲವಾರು ವಿಧಗಳಲ್ಲಿ ನಾವು ಗಜ್ಜರಿ ಸೇವನೆಯ ಬಗ್ಗೆ ಆಲೋಚನೆ ಮಾಡಬಹುದು.

ಗಜ್ಜರಿ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಗಜ್ಜರಿನಲ್ಲಿ ವಿಟಮಿನ್ ಎ, ಫೈಟೊಕೆಮಿಕಲ್ಸ್ , ವಿಟಮಿನ್ ಸಿ ಮತ್ತು ಫೈಬರ್ ಸಮೃದ್ಧವಾಗಿದೆ. ಅನೇಕರು ಗಜ್ಜರಿ ಹಾಗೆಯೇ ತಿನ್ನಲು ಇಷ್ಟಪಡುತ್ತಾರೆ. ಅದನ್ನು ಹಸಿಯಾಗಿ ತಿನ್ನುವುದಕ್ಕಿಂತ ಜ್ಯೂಸ್ ಮಾಡಿ ಕುಡಿಯುವುದು ಉತ್ತಮ ಎನ್ನುತ್ತಾರೆ ಪೌಷ್ಟಿಕತಜ್ಞರು. ಪ್ರತಿದಿನ ಒಂದು ಕಪ್ ಗಜ್ಜರಿ ಜ್ಯೂಸ್ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ.

ಗಜ್ಜರಿ ​ನಲ್ಲಿ ವಿಟಮಿನ್ ಸಿ ಅಧಿಕವಾಗಿದೆದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುತ್ತದೆವಿಟಮಿನ್ ಸಿ ಅನೇಕ ಸೋಂಕುಗಳಿಂದ ರಕ್ಷಿಸುತ್ತದೆಆಯಾಸವಿಲ್ಲದೆ ಚಟುವಟಿಕೆಗೆ ಸಹಾಯ ಮಾಡಲಿದೆಕೆಟ್ಟ ಕೊಲೆಸ್ಟ್ರಾಲ್ ಮತ್ತು ತ್ಯಾಜ್ಯವನ್ನು ತೆಗೆದುಹಾಕಲು ಉಪಯುಕ್ತಫೈಬರ್ ಜೀರ್ಣಕ್ರಿಯೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ, ದೃಷ್ಟಿ ಸುಧಾರಿಸುತ್ತದೆ.ಕಣ್ಣಿನ ಸಮಸ್ಯೆಗಳು ಬಾರದಂತೆ ತಡೆಯುತ್ತವೆ

ಗಜ್ಜರಿ ನಲ್ಲಿ ಬೀಟಾ-ಕ್ಯಾರೋಟಿನ್ ಸಮೃದ್ಧವಾಗಿರುತ್ತದೆ. ದೇಹವನ್ನು ಅವುಗಳನ್ನು ವಿಟಮಿನ್-ಎ ಆಗಿ ಪರಿವರ್ತಿಸುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕ್ಯಾರೆಟ್‌ನಲ್ಲಿರುವ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಸೋಂಕುಗಳಿಂದ ದೇಹವನ್ನು ರಕ್ಷಿಸುತ್ತದೆ. ಚಳಿಗಾಲದಲ್ಲಿ ಹೆಚ್ಚು ಕಾಡುವ ಶೀತ, ಕೆಮ್ಮು ಮತ್ತು ಜ್ವರದಂತಹ ಸಮಸ್ಯೆಗಳಿಂದ ರಕ್ಷಿಸುತ್ತದೆ. ಪ್ರತಿನಿತ್ಯ ಗಜ್ಜರಿ ಜ್ಯೂಸ್ ಕುಡಿದರೆ ಆರೋಗ್ಯವಾಗಿರುತ್ತೀರಿ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande