ಇಂದಿನಿಂದ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಅಭಿಯಾನ
ಬೆಂಗಳೂರು, 19 ನವೆಂಬರ್(ಹಿ.ಸ.) : ಆ್ಯಂಕರ್ : ನೈರ್ಮಲ್ಯ ಮತ್ತು ಶೌಚಾಲಯಗಳನ್ನು ಪ್ರವೇಶಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಾದ್ಯಂತ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತದೆ. ಇಡೀ ವಿಶ್ವದಲ್ಲಿ ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಶೌಚಾಲಯಗಳನ್ನು ಬಳಸದೆ ಇರು
From today, our toilet is our honor special


ಬೆಂಗಳೂರು, 19 ನವೆಂಬರ್(ಹಿ.ಸ.) :

ಆ್ಯಂಕರ್ : ನೈರ್ಮಲ್ಯ ಮತ್ತು ಶೌಚಾಲಯಗಳನ್ನು ಪ್ರವೇಶಿಸುವ ಅಗತ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ವಿಶ್ವಾದ್ಯಂತ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತದೆ.

ಇಡೀ ವಿಶ್ವದಲ್ಲಿ ಕಾಡುವ ಅತಿದೊಡ್ಡ ಸಮಸ್ಯೆ ಎಂದರೆ ಅದು ಶೌಚಾಲಯಗಳನ್ನು ಬಳಸದೆ ಇರುವುದು. ಇಂದಿಗೂ ಜಗತ್ತಿನ ಅನೇಕ ದೇಶಗಳ ಗ್ರಾಮಗಳಲ್ಲಿ ಶೌಚಾಲಯ ಬಳಕೆಯ ಬಗ್ಗೆ ಅರಿವೆ ಇಲ್ಲ. ಜಗತ್ತು ಎಷ್ಟೇ ಮುಂದುವರೆಯುತ್ತಿದ್ದರು ಜನರು ಮಾತ್ರ, ಬಯಲಿನಲ್ಲಿ ಮೂತ್ರ ವಿಸರ್ಜನೆ, ಶೌಚ ಮಾಡುವುದನ್ನು ಬಿಡುತ್ತಿಲ್ಲ.ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿವರ್ಷ19ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ.

ಈ ದಿನಾಚರಣೆಯು ಬಯಲು ಬಹಿರ್ದೇಸೆ ಮುಕ್ತ ಸ್ಥಿತಿಯ ಸ್ಥಾನಮಾನ ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಪ್ರಯುಕ್ತ ಪ್ರಸ್ತುತ ವರ್ಷ ನಮ್ಮ ಶೌಚಾಲಯ-ನಮ್ಮ ಗೌರವ ಎಂಬ ಶೀರ್ಷಿಕೆ ಹಾಗೂ ಅಂದದ ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಆಂದೋಲನ ಆಯೋಜಿಸಲಾಗುತ್ತಿದೆ. ವಿಶೇಷ ಆಂದೋಲನದಲ್ಲಿ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಚಟುವಟಿಕೆಗಳನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಲಾಗಿದೆ.

ಈ ವಿಶೇಷ ಆಂದೋಲನದ ಅವಧಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕಾರ್ಯತ್ಮಕವಲ್ಲದ/ನಿರುಪಯುಕ್ತ ಸಮುದಾಯ ಶೌಚಾಲಯಗಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುತ್ತದೆ. ನೀರು ಮತ್ತು ನೈರ್ಮಲ್ಯ ವಿಷಯಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಪ್ರಸ್ತುತ ಸ್ಥಿತಿಗತಿ ಮತ್ತು ತೆಗೆದುಕೊಳ್ಳಬೇಕಾದ ಪರಿಹಾರ/ಯೋಜನಾ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ.ನಿರುಪಯುಕ್ತ ಸಮುದಾಯ ಶೌಚಾಲಯಗಳ ದುರಸ್ತಿ, ಮರು ಸ್ಥಾಪನೆ ಮತ್ತು ಪರಿಷ್ಕರಣೆಯ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಇದರೊಂದಿಗೆ ವೈಯಕ್ತಿಕ ಮತ್ತು ಸಮುದಾಯ ಶೌಚಾಲಯಗಳನ್ನು ಸುಂದರೀಕರಣಗೊಳಿಸಲು ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಿ, ಸಮುದಾಯವನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲಾಗುವುದು. ಗ್ರಾಮೀಣ ಸಮುದಾಯದಲ್ಲಿ ಶೌಚಾಲಯಗಳ ಬಳಕೆಯನ್ನು ಉತ್ತೇಜನೆ, ವೈಯಕ್ತಿಕ ಗೃಹ ಶೌಚಾಲಯಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande