ವಿಶ್ವ ನಾಯಕರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ
ರಿಯೊ ಡಿ ಜನೈರೊ,19 ನವೆಂಬರ್(ಹಿ.ಸ.) : ಆ್ಯಂಕರ್ : ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಜಿ-೨೦ ಶೃಂಗಸಭೆಯ ನೇಪಥ್ಯದಲ್ಲಿ ಬ್ರಿಟನ್, ಇಟಲಿ, ಫ್ರಾನ್ಸ್, ನಾರ್ವೆ, ಪೋರ್ಚುಗಲ್ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವಾರು ದೇಶಗಳ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ, ಸಂಬಂಧಗಳನ್ನು ಬಲಪಡಿಸುವ ಮ
ರಿಯೊ ಡಿ ಜನೈರೊ


ರಿಯೊ ಡಿ ಜನೈರೊ,19 ನವೆಂಬರ್(ಹಿ.ಸ.) :

ಆ್ಯಂಕರ್ : ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಜಿ-೨೦ ಶೃಂಗಸಭೆಯ ನೇಪಥ್ಯದಲ್ಲಿ ಬ್ರಿಟನ್, ಇಟಲಿ, ಫ್ರಾನ್ಸ್, ನಾರ್ವೆ, ಪೋರ್ಚುಗಲ್ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವಾರು ದೇಶಗಳ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ, ಸಂಬಂಧಗಳನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು.

ಬ್ರೆಜಿಲ್​ನಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಅಲ್ಲಿ ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿಯಾದರು.

ಬ್ರೆಜಿಲ್, ಸಿಂಗಾಪುರ, ಬ್ರಿಟನ್, ಇಟಲಿ, ಫ್ರಾನ್ಸ್, ಇಂಡೋನೇಷ್ಯಾ ಸೇರಿದಂತೆ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು.

ರಿಯೊ ಡಿ ಜನೈರೊದಲ್ಲಿನ ಮ್ಯೂಸಿಯಂ ಆಫ್ ಮಾಡರ್ನ್ ಆರ್ಟ್‌ನಲ್ಲಿ ಎರಡು ದಿನಗಳ ಶೃಂಗಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್, ಪಿಎಂ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು.

ಇದಲ್ಲದೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ರಕ್ಷಣೆ, ಭದ್ರತೆ ಮತ್ತಿತರ ಸಂಬಂಧಗಳ ಬಲವರ್ಧನೆ ಕುರಿತು ಚರ್ಚಿಸಲಾಯಿತು.

ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಕೆಲವು ಚಿತ್ರಗಳನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande