ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ
ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ
ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆದ ರಾಷ್ಟಿçಯ ಐಕ್ಯತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಸ್‌ಪಿ ಕೆ.ಎಂ.ಶಾAತರಾಜು ಮತ್ತು ಇತರೇ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.


ಕೋಲಾರ, ೨೦ ನವೆಂಬರ್ (ಹಿ.ಸ) :

ಆ್ಯಂಕರ್ : ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್‌ರೀಫ್ಸ್ನಲ್ಲಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಂಗಳವಾರದ0ದು ಬೆಳಿಗ್ಗೆ ರಾಷ್ಟ್ರೀಯ ಐಕ್ಯತಾ ದಿನಾಚರಣೆಯನ್ನು ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾ ಪೊಲೀಸ್ ಕಚೇರಿಯ ಮುಂಬಾಗ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾ0ತರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡಿದರು. ಅಲ್ಲದೇ ವೈಯಕ್ತಿಕವಾಗಲೀ ಅಥವಾ ಸಾಮೂಹಿಕವಾಗಲೀ ನಮ್ಮಲ್ಲಿರುವ ಎಲ್ಲಾ ಬೇದ ಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡಲಾಯಿತು.

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ನ. ೧೯ ರಿಂದ ೨೫ರವರೆಗೆ ರಾಷ್ಟಿçಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಏಳು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಐಕ್ಯತಾ ಸಪ್ತಾಹದಲ್ಲಿ ದಿನಕ್ಕೊಂದು ದಿನಾಚರಣೆಯನ್ನಾಗಿ ಆಚರಿಸಲಾಗುವುದು. ಕ್ರಮವಾಗಿ ನ.೧೯ ರಿಂದ ರಾಷ್ಟ್ರೀಯ ಐಕ್ಯತಾ ದಿನ, ಅಲ್ಪಸಂಖ್ಯಾತರ ಕಲ್ಯಾಣ ದಿನ, ಭಾಷಾ ಸೌಹಾರ್ದತಾ ದಿನ, ದುರ್ಬಲ ವರ್ಗಗಳ ದಿನ, ಸಾಂಸ್ಕೃತಿಕ ಏಕತಾ ದಿನ, ಮಹಿಳಾ ದಿನ, ಪರಿಸರ ರಕ್ಷಣಾ ದಿನ ನಡೆಸಲಾಗುವುದು. ಮೊದಲ ದಿನವಾದ ಮಂಗಳವಾರ ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಹಮ್ಮಿಕೊಳ್ಳಲಾಗಿದೆಯೆಂದು ಎಸ್ಪಿ ಕೆ.ಎಂ.ಶಾ0ತರಾಜು ಅವರು ವಿವರಿಸಿದರು.

ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಲಿಂಗಾರೆಡ್ಡಿ, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ, ಪಿಎಸ್‌ಐ ಸುರೇಶ್‌ಸಿಂಗ್ ಸೇರಿದಂತೆ ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ, ಲಿಪಿಕ ಸಿಬ್ಬಂದಿ ಹಾಜರಿದ್ದರು.

ಚಿತ್ರ : ಕೆಜಿಎಫ್ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಸ್‌ಪಿ ಕೆ.ಎಂ.ಶಾ0ತರಾಜು ಮತ್ತು ಇತರೇ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande