ಬೆಳಗಾವಿ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರದಲ್ಲಿ ನಾನು ಕೂಡ ಐದು ದಿನಗಳ ಕಾಲ ಪ್ರಚಾರ ಮಾಡಿದ್ದೇನೆ. ಕಾಂಗ್ರೆಸ್ ಒಳಗೊಂಡ ಮಹಾವಿಕಾಸ ಅಘಾಡಿ ಸರ್ಕಾರ ರಚಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಮೀ ಹೆಬ್ಬಾಳಕರ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಸರಕಾರದ ವಿರುದ್ದ ಜನತೆ ಆಕ್ರೋಶ ಹೊಂದಿದ್ದು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದರು.
ರಾಜ್ಯದ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa