ನಾಗ್ಪುರ್,20 ನವೆಂಬರ್(ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬುಧವಾರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸಿದರು.
ಬಳಿಕ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಾಗರಿಕರ ಕರ್ತವ್ಯ ಎಂದ ಅವರು, ಪ್ರಸ್ತುತ ನಡೆಯುತ್ತಿರುವ ಚುನಾವಣೆಗೆ ಮತದಾನ ಮಾಡುವಂತೆ ನಾಗರಿಕರಲ್ಲಿ ಮನವಿ ಮಾಡಿದರು.
ನಾಗುರ ನೈಋತ್ಯವು ಮಹಾರಾಷ್ಟ್ರದ ನಾಗುರ ಜಿಲ್ಲೆಯ ಪ್ರಮುಖ ಸ್ಥಾನಗಳಲ್ಲಿ ಒಂದಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ನೇತೃತ್ವದ ಮಹಾಯುತಿಯನ್ನು ಪ್ರತಿನಿಧಿಸುವ ಈ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಫುಲ್ ಗುದಾಡೆ ಅವರನ್ನು ಕ್ಷೇತ್ರದಿಂದ
ಕಣಕ್ಕಿಳಿಸಿದ್ದಾರೆ.
ದೇವೇಂದ್ರ ಫಡ್ನವೀಸ್ ಮತದಾನ
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ನಾಗ್ಪುರದ ಮತಗಟ್ಟೆಯಲ್ಲಿ ಇಂದು ಮತದಾನ ಮಾಡಿದರು.
ಮತದಾನ ಕೇಂದ್ರದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವನ್ನು ಈಗ ಆಚರಿಸಲಾಗುತ್ತಿದೆ, ನಾನು ಮತ್ತು ನನ್ನ ಕುಟುಂಬ ನಮ್ಮ ಮತವನ್ನು ಚಲಾಯಿಸಿದ್ದೇವೆ. ಮಹಾರಾಷ್ಟ್ರದ ಸಹೋದರ ಸಹೋದರಿಯರಿಗೆ ಮತದಾನ ಮಾಡಲು ನಾನು ಮನವಿ ಮಾಡುತ್ತೇನೆ. ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್