ಬೆಳಗಾವಿ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ವಿಶ್ವ ವಿಕಲಚೇನತ ದಿನಾಚರಣೆ ಅಂಗವಾಗಿ ವಿಕಲಚೇತನರ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಏರ್ಪಡಿಸುವ ಕುರಿತಂತೆ ಇಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತರು, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರು, ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ವಿಶೇಷ ಶಾಲೆಗಳನ್ನು ನಡೆಸುತ್ತಿರುವ ಎಲ್ಲಾ ಸ್ವಯಂ-ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳು, ವಿಕಲಚೇತನ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa