ಜಾರ್ಜ್‌ಟೌನ್, 20 ನವೆಂಬರ್(ಹಿ.ಸ.) :
ಆ್ಯಂಕರ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ತಮ್ಮ ಯಶಸ್ವಿ ಬ್ರೆಜಿಲ್ ಪ್ರವಾಸದ ನಂತರ ಮೂರು ದಿನಗಳ ಭೇಟಿಗಾಗಿ ಗಯಾನಕ್ಕೆ ಪ್ರಯಾಣ ಆರಂಭಿಸಿದ್ದಾರೆ. ೧೯೬೮ರ ನಂತರ ಗಯಾನ ದೇಶಕ್ಕೆ ಭೇಟಿ ನೀಡುತ್ತಿರುವ ಮೊದಲ ಭಾರತದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಗಯಾನ ಅಧ್ಯಕ್ಷ ಡಾ.ಮೊಹಮ್ಮದ್ ಇರ್ಫಾನ್ ಅಲಿ ಅವರೊಂದಿಗೆ ಜಾರ್ಜ್‌ಟೌನ್‌ನಲ್ಲಿ ಪ್ರಧಾನಿ ಮಾತುಕತೆ ನಡೆಸಲಿದ್ದಾರೆ.
ಪ್ರಧಾನಮಂತ್ರಿಗಳು, ಎರಡನೇ ಕ್ಯಾರಿಕಾಮ್ ಇಂಡಿಯಾ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ, ಈ ಪ್ರದೇಶದೊಂದಿಗೆ ಭಾರತದ ದೀರ್ಘಕಾಲದ ಸ್ನೇಹ-ಸಂಬಂಧವನ್ನು ಮತ್ತಷ್ಟು ಹೆಚ್ಚಿಸಲು ಕ್ಯಾರಿಕಾಮ್ ಕೂಟದ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ನಾಳೆ ಪ್ರಧಾನಿ, ಗಯಾನ ದೇಶದ ಸಂಸತ್ ಅನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲದೆ, ಭಾರತೀಯ ಸಮುದಾಯದೊಂದಿಗೂ ಸಂವಾದ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್