ನವದೆಹಲಿ, 20 ನವೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ನವೆಂಬರ್ 21 ಮತ್ತು 22 ರಂದು ಎರಡು ದಿನ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ನವೆಂಬರ್.21ರಂದು ಹೈದರಾಬಾದ್ನಲ್ಲಿ ನಡೆಯುವ ಕೋಟಿ ದೀಪೋತ್ಸವ-2024ರಲ್ಲಿ ರಾಷ್ಟ್ರಪತಿಗಳು ಪಾಲ್ಗೊಳ್ಳಲಿದ್ದು, ನವೆಂಬರ್ ೨೨ ರಂದು ಸಾರ್ವಜನಿಕ ನಡವಳಿಕೆ ಮತ್ತು ಸಾರ್ವಜನಿಕ ಸುವ್ಯವಸ್ಥೆ ಕುರಿತು ನಡೆಯುವ ಅಂತರಾಷ್ಟ್ರೀಯ ಲೋಕಮಂಥನ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa