ಬೆಂಗಳೂರು, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅವರು ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಮನೋಹರ ತಹಶೀಲ್ದಾರ್ ನಿಧನದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಆರು ಬಾರಿ ಶಾಸಕರಾಗಿದ್ದ ಅವರು ಕಳೆದ ಲೋಕ ಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ಬಿಜೆಪಿ ಸೇರಿದ್ದರು, ಹಾವೇರಿ ಲೋಕ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ್ದರು. ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ.
ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa