ಮುರುಡೇಶ್ವರದಲ್ಲಿ  ಇಂದಿನಿಂದ ಮತ್ಸ್ಯ ಮೇಳ 
ಮುರುಡೇಶ್ವರ, 21 ನವೆಂಬರ್(ಹಿ.ಸ.) : ಆ್ಯಂಕರ್ : ಇಂದಿನಿಂದ ಮೂರು ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಆರ್.ಎನ್.ಎಸ್ ಗಾಲ್ಫ್ ರೆಸಾರ್ಟ್‌ನಲ್ಲಿ ‘ವಿಶ್ವ ಮೀನುಗಾರಿಕಾ ದಿನಾಚರಣೆ’ ಅಂಗವಾಗಿ ಮತ್ಸ್ಯ ಮೇಳ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿ
ಮುರುಡೇಶ್ವರದಲ್ಲಿ  ಇಂದಿನಿಂದ ಮತ್ಸ್ಯ ಮೇಳ


ಮುರುಡೇಶ್ವರ, 21 ನವೆಂಬರ್(ಹಿ.ಸ.) :

ಆ್ಯಂಕರ್ : ಇಂದಿನಿಂದ ಮೂರು ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರದ ಆರ್.ಎನ್.ಎಸ್ ಗಾಲ್ಫ್ ರೆಸಾರ್ಟ್‌ನಲ್ಲಿ ‘ವಿಶ್ವ ಮೀನುಗಾರಿಕಾ ದಿನಾಚರಣೆ’ ಅಂಗವಾಗಿ ಮತ್ಸ್ಯ ಮೇಳ ನಡೆಯಲಿದೆ.

ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಮುರುಡೇಶ್ವರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಮೀನುಗಾರಿಕೆ, ಒಳನಾಡು ಜಲಸಾರಿಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚೆ ಮಾಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಮೀನುಗಾರರ ನೈತಿಕ ಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸಮುದ್ರ ಹಾಗೂ ಒಳನಾಡು ಮೀನುಗಾರರನ್ನು ಸೇರಿಸಿಕೊಂಡು ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande