ನವದೆಹಲಿ, 21 ನವೆಂಬರ್(ಹಿ.ಸ.):
ಆ್ಯಂಕರ್ : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗುರುವಾರ ಚಾಲನೆ ನೀಡಿದರು.
ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್ ಮತ್ತು ಮದರ್ ಡೇರಿಯಂತಹ ಪ್ರಮುಖ ಬ್ರ್ಯಾಂಡ್ಗಳ ಜತೆ ಕರ್ನಾಟಕದ ನಂದಿನಿ ಕೂಡ ಪೈಪೋಟಿ ಒಡ್ಡಲಿದೆ.
ನವ
ದೆಹಲಿಯ ಅಶೋಕ ಹೊಟೇಲ್ನಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡುವ ಮೂಲಕ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ನವದೆಹಲಿಯ ಅಶೋಕ್ ಹೊಟೇಲ್ಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕನ್ನಡಿಗರಿಂದ ಪೂರ್ಣಕುಂಭ ಸ್ವಾಗತ ದೊರೆಯಿತು.
ಸಚಿವರಾದ ಭೈರತಿ ಸುರೇಶ್, ವೆಂಕಟೇಶ್, ಚಲುವರಾಯಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್