ಬೆಂಗಳೂರು, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯಾದ್ಯಂತ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ
ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್
ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ
ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್
ಈ ಅಧಿಕಾರಿಗಳಿಗೆ ಸಂಬಂಧಿಸಿದ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್