ಬೆಂಗಳೂರು, 21 ನವೆಂಬರ್ (ಹಿ.ಸ.) :
ಆ್ಯಂಕರ್ : ಅನರ್ಹರಲ್ಲದವರು ಬಿಪಿಎಲ್ ಪಡಿತರ ಚೀಟಿಗಳನ್ನುಪಡೆದುಕೊಂಡಿದ್ದು, ಇದನ್ನು ಪರಿಶೀಲನೆ ಮಾಡಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ ಹೊರತು ರದ್ದುಗೊಳಿಸುತ್ತಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶೇಕಡ ೭೦-೮೦ ರಷ್ಟು ಬಿಪಿಎಲ್ ಕಾರ್ಡ್‌ಗಳು ಇರಲು ಸಾಧ್ಯವಿಲ್ಲ. ಹೀಗಾಗಿ ವೈಜ್ಞಾನಿಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ .ಮನೆ, ಕಾರು ಹೊಂದಿರುವವರ ಮತ್ತು ಐಟಿದಾರರ ಕಾರ್ಡುಗಳು ಮಾತ್ರ ರದ್ದಾಗಿದ್ದು, ಹಾಗೊಂದು ವೇಳೆ ಅರ್ಹ ಫಲಾನುಭವಿಗಳ ಕಾರ್ಡ್ ರದ್ದಾಗಿದ್ದರೆ ಒಂದು ವಾರದ ಒಳಗಾಗಿ ಸರಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದತಿಗೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದ ಕೆಲವು ಅರ್ಹ ಫಲಾನುಭವಿಗಳ ಹೆಸರು ಬಿಟ್ಟು ಹೋಗಿದೆ. ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಅವರ ಗಮನಕ್ಕೆ ತರಲಾಗಿದ್ದು, ಇಂದು ಈ ಬಗ್ಗೆ ಹಿರಿಯ ಅಧಿಕಾರಿಗಳ ಸಭೆಯನ್ನು ಏರ್ಪಡಿಸಾಲಿಗೆ. ಇದನ್ನು ಶೀಘ್ರ ಸಮಸ್ಯೆ ಬಗೆಹರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್