ನವದೆಹಲಿ, 21 ನವೆಂಬರ್(ಹಿ.ಸ.):
ಆ್ಯಂಕರ್ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ನವದೆಹಲಿಯಲ್ಲಿ ಖ್ಯಾತ ವಕೀಲ ಅಭಿಷೇಕ್ ಮನುಸಿಂಘ್ವಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಮುಡಾ ಹಗರಣ ಸಂಬಂಧ ನಡೆಯುತ್ತಿರುವ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸಿದರು.ಪ್ರಸ್ತುತ ಮುಡಾ ಪ್ರಕರಣದ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿದ್ದು, ಈ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಸಿಂಘ್ವಿ ಮಧ್ಯೆ ಸಮಾಲೋಚನೆ ನಡೆದಿದೆ ಎನ್ನಲಾಗಿದೆ.
ಸಿದ್ದರಾಮಯ್ಯ ಮತ್ತು ಪಾರ್ವತಿ ವಿರುದ್ಧದ ಆರೋಪ ಸಂಬಂಧ ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಇತ್ತೀಚೆಗೆ, ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠವು ಮುಖ್ಯಮಂತ್ರಿ ವಿರುದ್ಧದ ಅಭಿಯೋಜನೆಗೆ ಅನುಮತಿ ನೀಡಿ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯು ಶನಿವಾರದಂದು ವಿಚಾರಣೆಗೆ ಬರಲಿದೆ.
ಹೀಗಾಗಿ ಮುಖ್ಯಮಂತ್ರಿಗಳು ತಮ್ಮ ವಕೀಲ ಅಭಿಷೇಕ್ ಮನುಸಿಂಘ್ವಿ ಜತೆ ಮುಂಬರುವ ಕಾನೂನು ಹೋರಾಟದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ನವ
ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ತೆರಳುವುದಕ್ಕೂ ಮುನ್ನ ಮುಖ್ಯಮಂತ್ರಿ ಅವರು ಸಿಂಘ್ವಿಯನ್ನು ಭೇಟಿಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್