ಬೆಂಗಳೂರು, 21 ನವೆಂಬರ್ (ಹಿ.ಸ.):
ಆ್ಯಂಕರ್:ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಲಮ್ ನಲ್ಲಿ ವಾಸಿಸುವ ಜನರ ಬಿಪಿಎಲ್ ಕಾರ್ಡ್ ರದ್ದಾಗಿದೆ. ಅವರು ತೆರಿಗೆ ಕಟ್ಟುವವರು ಅಂತ ಹೇಳುತ್ತಾರೆ. ಅವರೆಲ್ಲ ತೆರಿಗೆ ಕಟ್ಟುತ್ತಾರಾ ಎಂದು ಪ್ರಶ್ನಿಸಿದರು.
ಬಿಪಿಎಲ್ ಕಾರ್ಡ್ ರದ್ದಾದರೆ ಕೇವಲ ಅಕ್ಕಿ ಮಾತ್ರ ರದ್ದಾಗುವುದಿಲ್ಲ. ಔಷದಿ , ಆಸ್ಪತ್ರೆ ಸೌಲಭ್ಯ ಎಲ್ಲವೂ ಸ್ಥಗಿತವಾಗುತ್ತವೆ. ಜನರ ಕಷ್ಟ ಅವರಿಗೆ ಅರ್ಥ ಆಗುತ್ತಿಲ್ಲ. ಮುಡಾ ಅಂತ ಹೇಳಿ ಸೈಟ್ ವಾಪಸ್ ನೀಡಿದ್ದರು. ಈಗ ಬಿಪಿಎಲ್ ಕಾರ್ಡ್ ಪಡೆಯಲು ಮತ್ತೆ ಅರ್ಜಿ ಹಾಕಬೇಕಂತೆ ಹೇಳುತ್ತಾರೆ, ಇದು ಅತ್ಯಂತ ಜನ ವಿರೋಧಿ ಸರ್ಕಾರ. ಇದು ಯುಟರ್ನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa