ಗಯಾನಾ, 22 ನವೆಂಬರ್ (ಹಿ.ಸ.) :
ಆ್ಯಂಕರ್ : ಗಯಾನಾಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿನ ರಾಷ್ಟ್ರೀಯ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದರು.
ಪ್ರಜಾಪ್ರಭುತ್ವದ ಮೂಲತತ್ವ, ಭಾರತವನ್ನು ಒಟ್ಟಾಗಿ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ, ಪ್ರತಿಯೊಬ್ಬರ ಪ್ರಗತಿಗೆ ಪಾಲುದಾರಿಕೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಮಾನವೀಯತೆ ಮೊದಲು ಎಂಬ ತತ್ವ, ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಿ ನುಡಿದರು.
ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರಮೋದಿಯವರು ಭಾರತದ ಪರವಾಗಿ ಮಾತನಾಡಿದ ೧೪ ನೇ ನಿದರ್ಶನ ಇದಾಗಿದೆ. ವಿದೇಶೀ ಸಂಸತ್ತುಗಳಲ್ಲಿ ಅತಿ ಹೆಚ್ಚು ಭಾಷಣಗಳನ್ನು ಮಾಡಿದ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಅಮೆರಿಕ, ಯುರೋಪ್, ಆಫ್ರಿಕಾ, ಆಸ್ಟ್ರೇಲಿಯಾ ಸೇರಿದಂತೆ ಹಲವು ರಾಷ್ಟ್ರಗಳ ಸಂಸತ್ತನ್ನು ಉದ್ದೇಶಿಸಿ ಪ್ರಧಾನಿ ಭಾಷಣ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್