ಬಸವಕಲ್ಯಾಣ, 23 ನವೆಂಬರ್ (ಹಿ.ಸ.) :
ಆ್ಯಂಕರ್ : ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ನಡೆದ ಈ ಉಪಚುನಾವಣೆಯಲ್ಲಿ ಅಭಿವೃದ್ಧಿಗೆ ಒಲವು, ಗ್ಯಾರಂಟಿಗಳಿಗೆ ಗೆಲುವು ನೀಡಿರುವ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಉತ್ತಮ ಆಡಳಿತಕ್ಕೆ ಸಂದ ಜಯವಾಗಿದೆ ಎಂದು ಹೇಳಿದರು
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್