ಜನತಾ ನ್ಯಾಯಾಲಯದಿಂದ ತಕ್ಕ ತೀರ್ಪು: ಪಾಟೀಲ
ಬೆಂಗಳೂರು, 23 ನವೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿರುವುದು ನಮ್ಮ ಸರ್ಕಾರದ ಸಮರ್ಥ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ ಹೇಳಿದ್ದಾರೆ. ಉಪ ಚುನಾವಣೆಯ
Patil


ಬೆಂಗಳೂರು, 23 ನವೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಿರುವುದು ನಮ್ಮ ಸರ್ಕಾರದ ಸಮರ್ಥ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ ಹೇಳಿದ್ದಾರೆ.

ಉಪ ಚುನಾವಣೆಯ ಫಲಿತಾಂಶದ ನಂತರ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಉಪ ಚುನಾವಣೆ ಫಲಿತಾಂಶಗಳು 2028 ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದಿದ್ದಾರೆ.

ಕಲ್ಯಾಣ ಕರ್ನಾಟಕದ ಸಂಡೂರು, ಕಿತ್ತೂರು ಕರ್ನಾಟಕದ ಶಿಗ್ಗಾಂವಿ ಹಾಗೂ ಮೈಸೂರು ಕರ್ನಾಟಕ ಭಾಗದ ಚನ್ನಪಟ್ಟಣದಲ್ಲಿ ಜನರು ಕಾಂಗ್ರೆಸ್‌ ಪಕ್ಷಕ್ಕೆ ಜೈ ಎಂದಿದ್ದಾರೆ. ಇದರೊಂದಿಗೆ ಚುನಾವಣೋತ್ತರ ಸಮೀಕ್ಷೆಗಳನ್ನು ಸುಳ್ಳು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಬಿಜೆಪಿ ನಾಯಕರು ಬರೀ ಸುಳ್ಳು ಆರೋಪಗಳನ್ನು ಮಾಡುತ್ತಿದ್ದರು. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ವಕ್ಫ್‌ ಕುರಿತು ಜನರನ್ನು ದಿಕ್ಕು ತಪ್ಪಿಸಲು ಬಿಜೆಪಿಗರು ಪ್ರಯತ್ನಿಸಿದರು. ಜನತಾ ನ್ಯಾಯಾಲಯದಲ್ಲಿ ಜನರೇ ತಕ್ಕ ತೀರ್ಪು ಕೊಟ್ಟಿದ್ದಾರೆ. ಇದರಿಂದ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಿದೆ ಎಂದು ಶರಣ್‌ ಪ್ರಕಾಶ್‌ ಪಾಟೀಲ್‌ ಕುಟುಕಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande