ಬಿಜೆಪಿ ಅಪಪ್ರಚಾರಕ್ಕೆ ಹಿನ್ನಡೆ : ಭೋಸರಾಜು
ಬೆಂಗಳೂರು, 23 ನವೆಂಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಘಟಿತ, ಕುತಂತ್ರದ ಅಪಪ್ರಚಾರ ಮಾಡಿದ ಎನ್‌ಡಿಎ ಮೈತ್ರಿಕೂಟಕ್ಕೆ ರಾಜ್ಯದ ಮತದಾರರು ಕಾಂಗ್ರೆಸ್‌ಗೆ ಭರ್ಜರಿ ಜಯ ನೀಡುವ ಮೂಲಕ ಮುಖಭಂಗ ಮಾಡಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎ
Bosraju


ಬೆಂಗಳೂರು, 23 ನವೆಂಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಘಟಿತ, ಕುತಂತ್ರದ ಅಪಪ್ರಚಾರ ಮಾಡಿದ ಎನ್‌ಡಿಎ ಮೈತ್ರಿಕೂಟಕ್ಕೆ ರಾಜ್ಯದ ಮತದಾರರು ಕಾಂಗ್ರೆಸ್‌ಗೆ ಭರ್ಜರಿ ಜಯ ನೀಡುವ ಮೂಲಕ ಮುಖಭಂಗ ಮಾಡಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಹೇಳಿದ್ದಾರೆ.

ಉಪ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ತಳಮಳಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಗ್ಯಾರಂಟಿ ಯೋಜನೆಗಳು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿದರು. ಪ್ರತಿ ಹೆಜ್ಜೆ ಹೆಜ್ಜೆಗೂ ಆರೋಪಗಳ ಮೇಲೆ, ಇಲ್ಲ ಸಲ್ಲದ ವಿಚಾರಗಳನ್ನು ಎತ್ತಿಕೊಂಡು ಅಪಪ್ರಚಾರ ನಡೆಸಿದರು. ಸ್ವಚ್ಚ ಹಾಗೂ ಪಾರದರ್ಶಕ ರಾಜಕೀಯ ಜೀವನ ನಡೆಸುತ್ತಿರುವ ಮುಖ್ಯಮಂತ್ರಿಗಳ ಮೇಲೆ ಆರೋಪಗಳನ್ನು ಮಾಡುವ ಮೂಲಕ ಸರಕಾರವನ್ನು ಹೀಗಳೆಯುವ ಕುತಂತ್ರವನ್ನು ಬಿಜೆಪಿ ಅನುಸರಿಸಿತು. ಈ ಎಲ್ಲಾ ಕುತಂತ್ರಗಳ ನಡುವೆ ಕೇವಲ ಅಭಿವೃದ್ದಿ ಹಾಗೂ ಜನಪರ ಕಾಳಜಿಯನ್ನು ಮುಂದಿಟ್ಟುಕೊಂಡು ಹೋದ ಕಾಂಗ್ರೆಸ್‌ ಪಕ್ಷಕ್ಕೆ ಮತದಾರರು ತಮ್ಮ ಆಶೀರ್ವಾದ ನೀಡಿದ್ದಾರೆ ಎಂದು ಭೋಸರಾಜು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande