ಹುಬ್ಬಳ್ಳಿ, 23 ನವೆಂಬರ್ (ಹಿ.ಸ.):
ಆ್ಯಂಕರ್:ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಹಾಗೆಯೇ ಮುಂದುವರೆಯಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಂಗ್ಗಾವಿ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಂಗ್ಗಾವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೆನೆ ಎಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಲ್ಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ ಅಭ್ಯರ್ಥಿ ಎಂದು ಕಾಂಗ್ರೆಸ್ ಶಾಸಕರನ್ನು ಜನ ಆಯ್ಕೆ ಮಾಡಿದ್ದಾರೆ ಎಂದರು. ಇದು ಕಾಂಗ್ರೆಸ್ ಸರ್ಕಾರದ ಒಂದೂವರೆ ವರ್ಷದ ಆಡಳಿತಕ್ಕೆ ಸರ್ಟಿಫಿಕೇಟ್ ಅಂತ ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa