ಆಡಳಿತಾರೂಢ ಪಕ್ಷಕ್ಕೆ ಜೈಕಾರ ಸಹಜ : ಜೋಶಿ
ಹುಬ್ಬಳ್ಳಿ, 23 ನವೆಂಬರ್ (ಹಿ.ಸ.) : ಆ್ಯಂಕರ್ : ಉಪ ಚುನಾವಣೆಯಲ್ಲಿ ಜನ ಆಡಳಿತಾರೂಢ ಪಕ್ಷಕ್ಕೆ ಜೈಕಾರ ಹಾಕೋದು ಸಹಜ. ಜತೆಗೆ ರಾಜ್ಯದಲ್ಲಿ ಹಣ, ಹೆಂಡ ಮತ್ತು ಸರಕಾರಿ ಯಂತ್ರಗಳು ಅವ್ಯಾಹತ ಬಳಕೆ ಈ ಫಲಿತಾಂಶಕ್ಕೆ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ಲೇಷಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾ
Joshi


ಹುಬ್ಬಳ್ಳಿ, 23 ನವೆಂಬರ್ (ಹಿ.ಸ.) :

ಆ್ಯಂಕರ್ : ಉಪ ಚುನಾವಣೆಯಲ್ಲಿ ಜನ ಆಡಳಿತಾರೂಢ ಪಕ್ಷಕ್ಕೆ ಜೈಕಾರ ಹಾಕೋದು ಸಹಜ. ಜತೆಗೆ ರಾಜ್ಯದಲ್ಲಿ ಹಣ, ಹೆಂಡ ಮತ್ತು ಸರಕಾರಿ ಯಂತ್ರಗಳು ಅವ್ಯಾಹತ ಬಳಕೆ ಈ ಫಲಿತಾಂಶಕ್ಕೆ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ಲೇಷಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು

ಉಪ ಚುನಾವಣೆಗಳಲ್ಲಿ ಜನರು ಆಡಳಿತ ಪಕ್ಷದ ಜತೆ ಹೋಗೋದು ಸಾಮಾನ್ಯ. ಕ್ಷೇತ್ರದ ಅಭಿವೃದ್ಧಿ, ಹೆಚ್ಚಿನ ಅನುದಾನ ನಿರೀಕ್ಷಿಸಿ ಆಡಳಿತಾರೂಢ ಅಕ್ಷಕ್ಕೆ ಜೈಕಾರ ಹಾಕುತ್ತಾರೆ. ಆದರೆ, ಈ ಚುನಾವಣೆಯಲ್ಲಿ ಆಡಳಿತಾರೂಢರ ಹಣ-ಹೆಂಡ ಕೆಲಸ ಮಾಡಿದೆ ಎಂದು ಹೇಳಿದರು.

ಒಂದೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಯಲ್ಲಿ ಸಚಿವರು, 10-15 ಶಾಸಕರು ಬೀಡು ಬಿಟ್ಟು ಹಣ ಬಲದಿಂದ ಚುನಾವಣೆ ಎದುರಿಸಿದ್ದಾರೆ. ಜತೆಗೆ ಸರ್ಕಾರದ ಯಂತ್ರಗಳ ದುರ್ಬಳಕೆ ಆಗಿರುವುದೂ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಹೇಳಿದರು.

ರಾಜ್ಯ ವಿಧಾನಸಭೆ ಉಪ ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ. ಸೋಲಾದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷದವರ ಹಾಗೆ ಇವಿಎಂ ದೋಷ ಎನ್ನುವುದಿಲ್ಲ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande