ಅಪಪ್ರಚಾರಕ್ಕೆ ತಕ್ಕ ಉತ್ತರ : ಡಿ.ಕೆ. ಸುರೇಶ್
ಬೆಂಗಳೂರು, 23 ನವೆಂಬರ್(ಹಿ.ಸ.) : ಆ್ಯಂಕರ್ : “ಇಂದು ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ಪ್ರತಿ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ತಗಚಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರ ಪರ ಸೋಮವಾರ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ವೆಂಕಟೇಶ್, ಡಾ ಎಂ.ಸಿ. ಸುಧಾಕರ್, ಬೈರತಿ ಸುರೇಶ್, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕರಾದ ನೆಲಮಂಗಲ ಶ್ರೀನಿವಾಸ್, ಕೊತ್ತನೂರು ಮಂಜು, ಪೊನ್ನಣ್ಣ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ, ಮಾಜಿ ಶಾಸಕ  ಶಿಸಿ ಮಾತನಾಡಿದರು.


ಬೆಂಗಳೂರು, 23 ನವೆಂಬರ್(ಹಿ.ಸ.) :

ಆ್ಯಂಕರ್ : “ಇಂದು ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ಪ್ರತಿ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದ ಬಗ್ಗೆ ಸುರೇಶ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

“ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರ ಪುತ್ರರನ್ನು ಜನ ಸೋಲಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ಪ್ರತಿ ಪಕ್ಷಗಳು ಸರ್ಕಾರಕ್ಕೆ ಅನಗತ್ಯವಾಗಿ ಅಡ್ಡಿ ಮಾಡಿ ಅಭಿವೃದ್ಧಿಗೆ ತೊಂದರೆ ನೀಡದಂತೆ ಸಂದೇಶ ರವಾನಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಸರ್ಕಾರದ ವಿರುದ್ಧದ ಆರೋಪಗಳಿಗೆ ಉತ್ತರವೇ ಎಂದು ಕೇಳಿದಾಗ, “ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು, ಪ್ರತಿ ಪಕ್ಷಗಳ ನಾಯಕರ ಆರೋಪಗಳಿಗೆ ಜನ ಸ್ಪಷ್ಟ ತೀರ್ಪು ನೀಡಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಜನ ಈ ಸಂದೇಶ ನೀಡಿದ್ದಾರೆ. ಇನ್ನಾದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಮೇಲೆ ಸುಳ್ಳು ಆರೋಪ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡಲಿ” ಎಂದರು.

ಚನ್ನಪಟ್ಟಣದಲ್ಲಿ ಜಮೀರ್ ಅವರ ಹೇಳಿಕೆ ಅಢ್ಡಿಯಾಗಬಹುದು ಎಂಬ ಊಹಾಪೋಹ ಇತ್ತು ಎಂದು ಕೇಳಿದಾಗ, “ಆ ಭಾವನೆ ಸ್ಥಳೀಯ ಮಟ್ಟದಲ್ಲಿಲ್ಲ ಎಂದು ನಾನು ಸ್ಪಷ್ಟನೆ ನೀಡಿದ್ದೆ. ಒಬ್ಬ ಅಭ್ಯರ್ಥಿಯ ಪರವಾಗಿ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದ್ದೆ. ಇದರಿಂದ ಮಾಧ್ಯಮಗಳಿಗೆ ಬೇಸರವಾಗಿರಬಹುದು. ಜಮೀರ್ ಅವರ ಹೇಳಿಕೆ ಮೊದಲ ಬಾರಿಗೆ ಹೇಳಿದ್ದಲ್ಲ. ಜಮೀರ್ ಅವರು ಯಾರಿಗೆ ಈ ಪದ ಬಳಸಿದ್ದರು, ಅವರು ಇದಕ್ಕೆ ಈ ಹಿಂದೆ ಆಕ್ಷೇಪ ಮಾಡಿರಲಿಲ್ಲ. ಈ ಹಿಂದೆ ಮಾಧ್ಯಮಗಳು ಪ್ರಶ್ನೆ ಮಾಡಿರಲಿಲ್ಲ ಎಂದು ಹೇಳಿದ್ದೆ. ನಾವು ಹಳ್ಳಿ ಹಳ್ಳಿಗೆ ಹೋಗಿ ಒಂದು ತಿಂಗಳ ಕಾಲ ಚುನಾವಣೆ ಮಾಡಿದ್ದೆವು. ಕ್ಷೇತ್ರದ ಹೊರಗೆ ಈ ವಿಚಾರ ಚರ್ಚೆಯಾಗುತ್ತಿತ್ತೇ ಹೊರತು, ಕ್ಷೇತ್ರದ ಒಳಗೆ ಅಭಿವೃದ್ಧಿ ವಿಚಾರವಷ್ಟೇ ಚರ್ಚೆಯಾಗಿತ್ತು. ಕಾರಣ, ಈ ಕ್ಷೇತ್ರ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಕ್ಷೇತ್ರ. ಅವರಿಂದ ತೆರವಾದ ಹಿನ್ನೆಲೆಯಲ್ಲಿ ಅವರ ಅಭಿವೃದ್ಧಿ ಯೋಜನೆಗಳ ಚರ್ಚೆಯಾಗಿತ್ತು. ನಾನು ನನ್ನ ಅಂತರಾಳದ ಮಾತುಗಳನ್ನು ವ್ಯಕ್ತಪಡಿಸಿದ್ದೆ ಹೊರತು ಮಾಧ್ಯಮಗಳನ್ನು ದೂಷಿಸುವುದಲ್ಲ. ನನ್ನ ಮಾತಿನಿಂದ ಮಾಧ್ಯಮಗಳಿಗೆ ಬೇಸರವಾಗಿದ್ದರೆ ಕ್ಷಮೆ ಇರಲಿ” ಎಂದರು.

ಎಷ್ಟು ಅಂತರದಲ್ಲಿ ಗೆಲ್ಲಬಹುದು ಎಂದು ಕೇಳಿದಾಗ, “ಈಗಾಗಲೇ 22 ಸಾವಿರ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದು, ಇದೇ ಅಂತರ ಕಾಯ್ದುಕೊಳ್ಳುವ ವಿಶ್ವಾಸವಿದೆ” ಎಂದು ತಿಳಿಸಿದರು.

ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಕೇಳಿದಾಗ, “ನೀವು ನನ್ನ ಮೇಲೆ ಒತ್ತಡ ಹಾಕಿದ್ದ ಕಾರಣ ನಾನು ಕೇವಲ ಕರ್ನಾಟಕ ಚುನಾವಣೆ ಬಗ್ಗೆ ಮಾತ್ರ ಗಮನ ಹರಿಸಿದ್ದೆ. ಬೇರೆ ರಾಜ್ಯಗಳ ಚುನಾವಣೆ ಬಗ್ಗೆ ಗಮನಹರಿಸಿರಲಿಲ್ಲ. ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ತೆರಳಿದ್ದರು. ಈ ಫಲಿತಾಂಶದ ಬಗ್ಗೆ ನಮ್ಮ ಹೈಕಮಾಂಡ್ ನಾಯಕರು ಪರಿಶೀಲನೆ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಿದ ಎಲ್ಲಾ ಮತದಾರರಿಗೆ ವಿಶೇಷವಾಗಿ ಧನ್ಯವಾದಗಳು. ಪಕ್ಷದ ಪರವಾಗಿ ಶ್ರಮಿಸಿದ ಕಾರ್ಯಕರ್ತರು, ಮಂತ್ರಿಗಳು, ಶಾಸಕರು ಚುನಾವಣೆ ಮಾಡಿದ್ದು, ಈ ಗೆಲುವಿನಲ್ಲಿ ಅವರ ಕಾಣಿಕೆಯೂ ಇದೆ. ಅವರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande