ಯುವ ಶುದ್ಧಿ ಅಭಿಯಾನಕ್ಕೆ ಚಾಲನೆ
ಬೆಂಗಳೂರು, 23 ನವೆಂಬರ್ (ಹಿ.ಸ.) : ಆ್ಯಂಕರ್ : ಭಾರತೀಯ ನರ್ಸಸ್ ಮತ್ತು ಅಲೈಡ್ ಸಂಘದ ವತಿಯಿಂದ ಮಾದಕ ದ್ರವ್ಯ ಸೇವನೆ ವಿರುದ್ಧ ಆಯೋಜಿಸಿರುವ ಯುವ ಶುದ್ಧಿ ಅಭಿಯಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮಾದಕ ವ್ಯಸನವು ಸಮಾಜಕ್ಕೆ ಗಂಭೀರ ಸಮ
ಯುವ ಶುದ್ಧಿ ಅಭಿಯಾನಕ್ಕೆ ಚಾಲನೆ


ಬೆಂಗಳೂರು, 23 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ನರ್ಸಸ್ ಮತ್ತು ಅಲೈಡ್ ಸಂಘದ ವತಿಯಿಂದ ಮಾದಕ ದ್ರವ್ಯ ಸೇವನೆ ವಿರುದ್ಧ ಆಯೋಜಿಸಿರುವ ಯುವ ಶುದ್ಧಿ ಅಭಿಯಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮಾದಕ ವ್ಯಸನವು ಸಮಾಜಕ್ಕೆ ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಇದು ನಮ್ಮ ದೇಹಕ್ಕೆ ಹಾನಿಯುಂಟುಮಾಡುವುದು ಮಾತ್ರವಲ್ಲದೆ ನಮ್ಮ ಮಾನಸಿಕ ಮತ್ತು ಸಾಮಾಜಿಕ ಜೀವನದ ಮೇಲೆ ಪರಿಣಾಮ ಬೀರಲಿದೆ. ಪ್ರತಿಯೊಬ್ಬರು ವ್ಯಸನದ ಅಪಾಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. ಈ ಅಭಿಯಾನದಲ್ಲಿ ವಿದ್ಯಾರ್ಥಿಗಳನ್ನು ಅರ್ಥಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಹಾಗೂ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್


 rajesh pande