ಕಲಬುರಗಿ , 24 ನವೆಂಬರ್ (ಹಿ.ಸ.) :
ಆ್ಯಂಕರ್ : ಶೃಂಗೇರಿ ಮಠದ ಆಸ್ತಿ ವಕ್ಫ್ ಆಸ್ತಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಹಜರತ್ ಟಿಪ್ಪು ಸುಲ್ತಾನ್ ವಂಶಸ್ಥ ಸಾಹೇಬ್ ದಾದಾ ಮನ್ಸೂರ್ ಅಲಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶೃಂಗೇರಿ ಮಠದ ಆಸ್ತಿ ಹಿಂದೂ ಧರ್ಮಕ್ಕೆ ಸೇರಿದ್ದು ಎಂಬ ಕಾರಣಕ್ಕಾಗಿ ಟಿಪ್ಪು ಸುಲ್ತಾನ್ ತಮ್ಮ ಸೇನೆಯ ಸಿಪಾಯಿಗಳನ್ನು ಕಳುಹಿಸಿ ಮಠದ ರಕ್ಷಣೆ ಮಾಡುವ ಕೆಲಸ ಮಾಡಿದ್ದರು. ಶೃಂಗೇರಿ ಮಠವನ್ನು ಕೆಲವರು ಒಡೆದು ಹಾಕಿದಾಗ ಟಿಪ್ಪು ಸುಲ್ತಾನ್ ಸಿಪಾಯಿಗಳನ್ನು ಕಳುಹಿಸಿ ರಕ್ಷಣೆ ಮಾಡಿದ್ದಲ್ಲದೆ, ಅದರ ಪುನರ್ ನಿರ್ಮಾಣ ಮಾಡಿಸಿದ್ದಾರೆ ಎಂದು ನುಡಿದರು.
ದೊಡ್ಡಬಳ್ಳಾಪುರದ ಶ್ರೀನರಸಿಂಹ ಸ್ವಾಮಿ ದೇವಸ್ಥಾನ, ಚಾಮುಂಡೇಶ್ವರಿ ದೇವಸ್ಥಾನ, ನಂಜುಂಡೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಸಾಕಷ್ಟು ದೇವಸ್ಥಾನಗಳಿಗೆ ಹಜರತ್ ಟಿಪ್ಪು ಸುಲ್ತಾನ್ ಜಮೀನು ನೀಡಿದ್ದಾರೆ ಎಂದು ವಿವರಿಸಿದರು.
ವಕ್ಫ್ ಆಸ್ತಿಯನ್ನು ಅಲ್ಲಾಹುವಿನ ಹೆಸರಲ್ಲಿ ಬಡವರು ಮತ್ತು ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದ್ದಾರೆ. ನಂತರ ಸರ್ಕಾರ ವಕ್ಫ್ ಬೋರ್ಡ್ ಎಂದು 1995 ರಲ್ಲಿ ನಾಮಕರಣ ಮಾಡಿದೆ. ಸಾಕಷ್ಟು ವಕ್ಫ್ ಆಸ್ತಿ ಮತ್ತು ಜಮೀನು ಬೇರೆಯವರ ಪಾಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್