ನವದೆಹಲಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಮೈಸೂರಿನ ಅರ್ಲಿ ಬರ್ಡ್ ಸಂಸ್ಥೆಯ ಕೆಲಸವನ್ನು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಸಂಸ್ಥೆಯು ಮಕ್ಕಳಿಗೆ ಪಕ್ಷಿ, ಪ್ರಕೃತಿಯ ಮಹತ್ವವನ್ನು ತಿಳಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ಮಕ್ಕಳಿಗೆ ಪ್ರಕೃತಿ ಶಿಕ್ಷಣ ನೀಡುತ್ತಿರುವ ಸಂಸ್ಥೆ ಇದಾಗಿದ್ದು, ನಗರದಲ್ಲಿರುವ ಮಕ್ಕಳನ್ನು ಹಳ್ಳಿಗಳಿಗೆ ಕರೆದೊಯ್ದು ಪಕ್ಷಿ ಸಂಕುಲದ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೆ ಅದರಿಂದಾಗುವ ಪ್ರಯೋಜನಗಳ ಬಗ್ಗೆಯೂ ತಿಳಿ ಹೇಳುತ್ತಿದ್ದು, ಉತ್ತಮ ನಾಗರಿಕರನ್ನಾಗಿ ಮಾಡಲು ಶ್ರಮ ಪಡುತ್ತಿದೆ. ಅರ್ಲಿ ಬರ್ಡ್ ಸಂಸ್ಥೆಯು ವಿಶೇಷ ಗ್ರಂಥಾಲಯ, ಕಥಾ ಪುಸ್ತಕಗಳನ್ನು ಅಲ್ಲಿರಿಸಿದೆ ಎಂದು ಮೋದಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್