ಮಂಗಳೂರು, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಸೋಲಾಗಿದೆ. ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್ನಲ್ಲಿ ಹಣ ಬಂದಿದೆ. ಹಣ ಎಣಿಸುವ ಮಷಿನ್ ಬಿಟ್ಟು ತೂಕದ ಲೆಕ್ಕದಲ್ಲಿ ಖರ್ಚು ಮಾಡಿದ್ದಾರೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.ರಾಜ್ಯದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್