ಹುಬ್ಬಳ್ಳಿ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ಸಂಸ್ಥೆಯಲ್ಲಿ ನೈರುತ್ಯ ರೈಲ್ವೆ ಕನ್ನಡ ಸಂಘವು ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಿತು. ಹಿರಿಯ ಸಾಹಿತಿ ಡಾ.ಮಾಲತಿ ಪಟ್ಟಣಶೆಟ್ಟಿ, ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಸತ್ಯ ಪ್ರಕಾಶ್ ಶಾಸ್ತ್ರಿ, ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಡಾ.ಅನೂಪ್ ದಯಾನಂದ ಸಾಧು, ನೈರುತ್ಯ ರೈಲ್ವೆ ಕನ್ನಡ ಸಂಘದ ಅಧ್ಯಕ್ಷ ಮಹಾಂತಪ್ಪ ನಂದೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಡಾ.ಮಾಲತಿ ಪಟ್ಟಣಶೆಟ್ಟಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಆಚರಣೆಯನ್ನು ಶ್ಲಾಘಿಸಿದರು ಮತ್ತು ಕನ್ನಡ ಪುಸ್ತಕ ನುಡಿ ತೋರಣ ವನ್ನು ಅನಾವರಣಗೊಳಿಸಿದರು. ಸಾಮಾನ್ಯ ಜನರ ಜೀವನಾಡಿಯಾಗಿ ರೈಲ್ವೆ ಸೇವೆಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ರೈಲ್ವೆ ಇಲಾಖೆಯಲ್ಲಿ ಕನ್ನಡ ಸಂಘವನ್ನು ಸ್ಥಾಪಿಸಿರುವುದನ್ನು ಶ್ಲಾಘಿಸಿದರು. ರಾಷ್ಟ್ರವನ್ನು ಸಂಪರ್ಕಿ
ರೈಲ್ವೆಯ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ನೈಋತ್ಯ ರೈಲ್ವೆ ಆಡಳಿತದ ಕೊಡುಗೆಗಳನ್ನ ಶ್ಲಾಘಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa