ಚನ್ನಪಟ್ಟಣ, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ದೇವೇಗೌಡರು ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಿಲ್ಲ ಎಂದು ಜೆಡಿಎಸ್ ಯುವರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಆತ್ಮಹತ್ಯೆಗೆ ಯತ್ನಿಸಿದ್ದ ಚನ್ನಪಟ್ಟಣದ ಶ್ರೀರಾಂಪುರ ಗ್ರಾಮದ ಮಂಜುನಾಥ್ ನಿವಾಸಕ್ಕೆ ಭೇಟಿ ನೀಡಿದರು. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರಿಸುತ್ತೇನೆ. ಇಲ್ಲಿ ನಮ್ಮ ಪಕ್ಷಕ್ಕೆ ದೊಡ್ಡಮಟ್ಟದ ಅಭಿಮಾನ ಇದೇ. ಅಭಿಮಾನದಿಂದ ಜೆಡಿಎಸ್ ಪಕ್ಷವನ್ನ ಕಟ್ಟಿದ್ದಾರೆ. ಹಾಗಾಗಿ ನಾವು ಕಾರ್ಯಕರ್ತರ ಜೊತೆಗೆ ಇರುತ್ತೇವೆ. ಯಾರು ಸಹ ತಮ್ಮ ಕುಟುಂಬಕ್ಕೆ ನೋವು ಕೊಡಬೇಡಿ. ನಿಮ್ಮ ಜತೆಗೆ ಸದಾ ಇರುತ್ತೇನೆ. ಯಾರು ಸಹ ಕೆಟ್ಟ ನಿರ್ಧಾರ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಿಗೆ ಕಿವಿ ಮಾತು ಹೇಳಿದರು. ಈ ಮೂಲಕ ಮುಂದೆ ಚನ್ನಪಟ್ಟಣದಲ್ಲಿಯೇ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಹೇಳಿದರು.
ದೇವೇಗೌಡರು ರಾಜಕೀಯ ನಿವೃತ್ತಿ ಘೋಷಿಸಲಿ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಕಳೆದ ೬೨ ವರ್ಷಗಳ ದೇವೇಗೌಡರ ರಾಜಕೀಯ ಬದುಕಿನಲ್ಲಿ ಏನೂ ಅಪೇಕ್ಷೆ ಇಟ್ಟುಕೊಂಡಿಲ್ಲ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್