ಬೆಂಗಳೂರು, 24 ನವೆಂಬರ್ (ಹಿ.ಸ.) :
ಆ್ಯಂಕರ್ : ಈ ಚುನಾವಣೆಯಲ್ಲಿ ಆ ಒಂದು ಸಮುದಾಯವನ್ನ ಕಡೆಗಣಿಸಬಾರದು, ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು ಅಂತ ಪ್ರಯತ್ನ ಮಾಡಲಾಯಿತು, ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ, ಅಂತ ಆ ಸಮುದಾಯ ನಿನ್ನೆ ಸ್ಪಷ್ಟ ಸಂದೇಶ ಕೊಟ್ಟಿದೆ ಎಂದು ನಿಖಿಲ್ ಕುಮಾರಸ್ವಾಮಿ ಬೇಸರ ಹೊರಹಾಕಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರ್ಯಕರ್ತ ನಿಂತರೂ ಬರುತ್ತಿದ್ದ ನಮ್ಮ ಸಾಂಪ್ರದಾಯಿಕ ಕನಿಷ್ಠ 60 ಸಾವಿರ ಮತಗಳು ಈಗ 87 ಸಾವಿರಕ್ಕೆ ಹೋಗಿ ಮುಟ್ಟಿದೆ. ಪಕ್ಷದ ಅಭಿಮಾನಿಗಳಾಗಿರುವ ಜನ ಯಾರೂ ನಮ್ಮ ಕೈಬಿಟ್ಟಿಲ್ಲ. ಆದರೆ ಒಂದು ಸಮುದಾಯದ ಪರವಾಗಿ ದೇವೇಗೌಡರು ಹಿಂದೆ ನಿರ್ಣಯ ಕೈಗೊಂಡಿದ್ದರು, ಮೀಸಲಾತಿ ವಿಚಾರದ ಬಗ್ಗೆಯೂ ತೀರ್ಮಾನ ಮಾಡಿದ್ದರು. ಈ ಚುನಾವಣೆಯಲ್ಲೂ ಆ ಸಮುದಾಯವನ್ನ ಕಡೆಗಣಿಸಬಾರದು, ಅವರನ್ನೂ ವಿಶ್ವಾಸಕ್ಕೆ ತಗೊಂಡು ಹೋಗಬೇಕು ಅಂತ ಪ್ರಯತ್ನ ಮಾಡಿದ್ವಿ. ಆದರೆ ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅಂತ ಆ ಸಮುದಾಯ ನಿನ್ನೆ ಸ್ಪಷ್ಟ ಸಂದೇಶ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಬೇರೆ ಸಮುದಾಯಗಳನ್ನು ಯಾವ ರೀತಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ನುಡಿದರು.
ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್